ಧಾರವಾಡ: ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಇಟ್ಟರೆ ನಾನು ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ಹೇಳಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಜಯ ಕರ್ನಾಟಕ ಹಾಗೂ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಅವರ ಭಾವಚಿತ್ರವಿದ್ದ ಬ್ಯಾನರ್‌ಗೆ ಚಪ್ಪಲಿ ಏಟು ನೀಡಿದ ಪ್ರತಿಭಟನಾಕಾರರು ಆ ಬ್ಯಾನರ್ ಸುಟ್ಟು ಆಕ್ರೋಶ ಹೊರ ಹಾಕಿದರು.
ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ ಮಲ್ಲಿಕಾರ್ಜುನ ಗೌಡ ಅವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
Kshetra Samachara
31/01/2022 02:25 pm