ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಬಿಜೆಪಿ ಎಂದಿಗೂ ತೊರೆಯುವುದಿಲ್ಲ: ಬೇರೆಯವರೇ ನಮ್ಮ ಪಕ್ಷಕ್ಕೆ ಬರುತ್ತಾರೆ

ಧಾರವಾಡ: ನಾನು ಎಂದಿಗೂ ಬಿಜೆಪಿ ತೊರೆಯುವುದಿಲ್ಲ. ನನಗೆ ತಿಳಿದಮಟ್ಟಿಗೆ ಬೇರೆಯವರೇ ನಮ್ಮ ಪಕ್ಷಕ್ಕೆ ಬರುತ್ತಾರೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಕೆಲವು ದಿನಗಳಿಂದ ಬೇರೆ ಬೇರೆ ಪತ್ರಿಕೆಗಳಲ್ಲಿ ಬೆಲ್ಲದ ಅವರು ಬಿಜೆಪಿ ತೊರೆಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ನಾನು ಬಿಜೆಪಿ ಪಕ್ಷದ ತತ್ವ, ಸಿದ್ಧಾಂತವನ್ನು ತೊರೆಯುವ ಪ್ರಶ್ನೆಯೇ ಇಲ್ಲ. ಬೇರೆಯವರೇ ನಮ್ಮ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂದರು.

ಕೆಲವರು ಸಹಿಸದವರು ಈ ರೀತಿಯ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಜನಪರ ಕಾರ್ಯಗಳನ್ನು ಜನ ಮೆಚ್ಚಿದ್ದಾರೆ. ಇಲ್ಲಿ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ನಂತರ ಅಭಿವೃದ್ಧಿ ಕಾರ್ಯಗಳು ವೇಗ ಪಡೆದುಕೊಂಡಿವೆ ಎಂದರು.

ವ್ಯಾಪಾರ ಮಾಡಿಕೊಂಡಿದ್ದ ನನ್ನನ್ನು ಬಿಜೆಪಿ ಪಕ್ಷ ಗುರುತಿಸಿ ದೊಡ್ಡ ಜವಾಬ್ದಾರಿ ಕೊಟ್ಟಿದೆ. ಆದ್ದರಿಂದಲೇ ಎರಡು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ ಎಂದರು.

ನಾನು ಸಚಿವನಾಗಬೇಕು ಎಂದು ಎಲ್ಲೂ ಬೇಡಿಕೆ ಇಟ್ಟಿಲ್ಲ. ಪಕ್ಷದ ವರಿಷ್ಠರು ಯಾವ ತೀರ್ಮಾನ ಕೈಗೊಳ್ಳುತ್ತಾರೋ ಅದಕ್ಕೆ ನಾನು ಬದ್ಧ ಎಂದರು.

ಧಾರವಾಡದ ಕೆಸಿಡಿ ಕಾಲೇಜು ಬಳಿ ತಿನಿಸು ಕಟ್ಟೆ ಮಾಡುವ ಯೋಜನೆ ಹಾಕಿಕೊಂಡಿದ್ದೇವೆ. ಉತ್ತಮ ಪಾರ್ಕಿಂಗ್ ವ್ಯವಸ್ಥೆ ಕೂಡ ಮಾಡಲಿದ್ದೇವೆ. ಈ ತಿನಿಸು ಕಟ್ಟೆ 4.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ ಎಂದರು.

Edited By : Manjunath H D
Kshetra Samachara

Kshetra Samachara

31/01/2022 04:43 pm

Cinque Terre

37.27 K

Cinque Terre

11

ಸಂಬಂಧಿತ ಸುದ್ದಿ