ಅಣ್ಣಿಗೇರಿ: ಪಟ್ಟಣದ ಪುರಸಭೆಯ ಚುನಾಯಿತ ಸದಸ್ಯರ ಹೆಸರುಗಳನ್ನು ಸರ್ಕಾರಕ್ಕೆ ಈಗಾಗಲೇ ಕಳುಹಿಸಲಾಗಿದೆ. ಸದ್ಯ ಕೇಂದ್ರ ಬಜೆಟ್ ಇದ್ದು ಅದಾದ ಬಳಿಕ ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆ ದಿನಾಂಕ ತಿಳಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹೇಳಿದ್ದಾರೆ.
ಅಣ್ಣಿಗೇರಿ ಪಟ್ಟಣಕ್ಕೆ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಕೃಷಿ ಸಲಕರಣೆಗಳ ಸಂಶೋಧಕ ನಡಕಟ್ಟಿನ ಅವರಿಗೆ ಅಭಿನಂದಿಸಲು ಪಟ್ಟಣಕ್ಕೆ ಆಗಮಿಸಿದಾಗ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಯಾವುದೇ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ವಿಚಾರದಲ್ಲಿ ಯಾವುದೇ ವಿಳಂಬವಾಗುವುದಿಲ್ಲ. ಸರ್ಕಾರದ ನಿಯಮದಂತೆ ಒಂದು ತಿಂಗಳ ಒಳಗಾಗಿ ಹೆಸರುಗಳನ್ನು ಕಳಿಸಿಕೊಡಲಾಗಿದೆ ಆದಷ್ಟು ಬೇಗ ದಿನಾಂಕ ನಿಗದಿಯಾಗುತ್ತದೆ ಎಂದು ತಿಳಿಸಿದ್ದಾರೆ.
Kshetra Samachara
01/02/2022 10:08 am