ಹುಬ್ಬಳ್ಳಿ: ಗಣರಾಜ್ಯೋತ್ಸವ ದಿನದಂದು ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರ ಇಟ್ಟರೆ ಧ್ವಜಾರೋಹಣ ಮಾಡುವುದಿಲ್ಲ ಎಂದು ಹೇಳಿಕೆ ನೀಡಿದ್ದ ರಾಯಚೂರಿನ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಹಾಗೂ ರಾಜ್ಯದ ಸಕಲ ನ್ಯಾಯಾಲಯಗಳಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಅಳವಡಿಸಬೇಕೆಂದು ಆಗ್ರಹಿಸಿ, ವಿವಿಧ ದಲಿತ ಸಂಘ-ಸಂಸ್ಥೆಗಳ ಮಹಾಮಂಡಳ ವತಿಯಿಂದ ನಗರದ ಅಂಬೇಡ್ಕರ್ ಸರ್ಕಲ್ ದಿಂದ ತಹಶೀಲ್ದಾರ ಕಚೇರಿ ವರೆಗೆ ಬೃಹತ್ ಪ್ರತಿಭಟನೆ ಮುಖಾಂತರ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.
Kshetra Samachara
02/02/2022 01:11 pm