ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳದಲ್ಲಿ ನ್ಯಾಯಾಧೀಶ ಮಲ್ಲಿಕಾರ್ಜುನಗೌಡರ ಶವಯಾತ್ರೆ

ಕುಂದಗೋಳ : ಗಣರಾಜ್ಯೋತ್ಸವದ ದಿನದಿಂದು ಡಾ.ಬಿ.ಆರ್.ಅಂಬೇಡ್ಕರ್'ರವರ ಭಾವಚಿತ್ರ ಇಟ್ಟರೇ ಧ್ವಜಾರೋಹಣ ಮಾಡುವುದಿಲ್ಲ ಎಂದು ಹೇಳಿಕೆ ನೀಡಿದ್ದ ರಾಯಚೂರಿನ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ವಿವಿಧ ದಲಿತ ಸಂಘಟನೆಗಳು ಪಟ್ಟಣದ ಗಾಳಿ ಮರೆಮ್ಮದೇವಿ ದೇವಸ್ಥಾನದಿಂದ ತಹಶೀಲ್ದಾರ ಕಚೇರಿವರೆಗೆ ಹಲಗೆ ಬಾರಿಸುತ್ತ ಪಾದಯಾತ್ರೆ ಕೈಗೊಂಡರು.

ಪ್ರತಿಭಟನೆಯಲ್ಲಿ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಶವಯಾತ್ರೆ ಕೈಗೊಂಡ ದಲಿತ ಸಂಘಟನೆಗಳು ಕುಂದಗೋಳ ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ನ್ಯಾಯಾಧೀಶ ಮಲ್ಲಿಕಾರ್ಜುನಗೌಡರವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ತಹಶೀಲ್ದಾರ ಕಚೇರಿ ತಲುಪಿದ ದಲಿತ ಸಂಘಟನೆಗಳ ಪ್ರತಿಭಟನೆಯೂ ಕಚೇರಿ ಆವರಣದಲ್ಲಿ ಹಾಡು ಹೇಳುವ ಮೂಲಕ ಅಂಬೇಡ್ಕರ್ ಸಾಧನೆಗಳನ್ನು ಮೆಲುಕು ಹಾಕಿ ನ್ಯಾಯದೀಶ ಮಲ್ಲಿಕಾರ್ಜುನಗೌಡ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ತಹಶೀಲ್ದಾರ ಅಶೋಕ್ ಶಿಗ್ಗಾಂವಿ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈ ಪ್ರತಿಭಟನೆಯಲ್ಲಿ ವಿವಿಧ ದಲಿತ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕು ಪಾಲ್ಗೊಂಡು ಪ್ರತಿಭಟನೆ ಹೆಚ್ಚಿನ ಬೆಂಬಲ ವ್ಯಕ್ತಪಡಿಸಿದರು.

Edited By : Manjunath H D
Kshetra Samachara

Kshetra Samachara

02/02/2022 06:02 pm

Cinque Terre

21.41 K

Cinque Terre

1

ಸಂಬಂಧಿತ ಸುದ್ದಿ