ಹುಬ್ಬಳ್ಳಿ: ಇತ್ತೀಚೆಗೆ ಹುಮನಾಬಾದ್ ತಹಶೀಲ್ದಾರ ಕಚೇರಿಗೆ ನುಗ್ಗಿದ ದುಷ್ಕರ್ಮಿಗಳು ಕುರ್ಚಿಗಳನ್ನು ಧ್ವಂಸಗೊಳಿಸಿ, ಕರ್ತವ್ಯ ನಿರತ ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಮೇಲೆ ಹಲ್ಲೆ ನಡೆಸಿದ್ದರು. ಈ ಕೃತ್ಯದಲ್ಲಿ ಭಾಗಿಯಾದ ಎಲ್ಲರ ಮೇಲೆ ಗೂಂಡಾ ಕಾಯ್ದೆ ಅಡಿಯಲ್ಲಿ ಕಠಿಣಕ್ರಮ ಕೈಗೊಳ್ಳಬೇಕು ಎಂದು ವೀರಶೈವ ಲಿಂಗಾಯತ ಸಮಾಜ ಒತ್ತಾಯಿಸಿದೆ.
ಹುಬ್ಬಳ್ಳಿ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ವೀರಶೈವ ಲಿಂಗಾಯತ ಸಮಾಜದ ಪದಾಧಿಕಾರಿಗಳು, ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ. ಮತ್ತು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.
Kshetra Samachara
03/02/2022 02:52 pm