ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಸಭಾಪತಿ ಹೊರಟ್ಟಿ ರಾಜೀನಾಮೆ ನೀಡಿ ತನಿಖೆ ಎದುರಿಸಲಿ

ಧಾರವಾಡ: ಸರ್ವೋದಯ ಶಿಕ್ಷಣ ಟ್ರಸ್ಟ್‌ಗೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಮೇಲೆ ಈಗಾಗಲೇ ದೂರು ದಾಖಲಾಗಿದ್ದು, ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ ಎಂದು ಹರಿಹರ ರಾಜನಳ್ಳಿ ವಾಲ್ಮೀಕಿ ಪೀಠದ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಆಗ್ರಹಿಸಿದರು.

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ವೋದಯ ಶಿಕ್ಷಣ ಸಂಸ್ಥೆಯಲ್ಲಿ ಹೊರಟ್ಟಿ ಅವರು ತಮ್ಮ ರಾಜಕೀಯ ಪ್ರಭಾವ ಬೀರಿ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಶಾಲೆಯಲ್ಲಿ ವರ್ಗಾವಣೆ ಹಾಗೂ ನೇಮಕಾತಿ ಪ್ರಕ್ರಿಯೆ ನಡೆಸಿದ್ದಾರೆ. ಹೀಗಿರುವಾಗ ನಾನು ಎಲ್ಲಾ ತನಿಖೆಗೂ ಸಿದ್ಧ ಎಂದು ಹೇಳಿರುವ ಹೊರಟ್ಟಿ ಅವರು ತಮ್ಮ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು. ಅವರು ಸಭಾಪತಿ ಆಗಿರುವುದರಿಂದ ಅವರಿಗೆ ಯಾವುದೇ ಸಮನ್ಸ್ ನೀಡಲು ಬರುವುದಿಲ್ಲ ಎಂದರು.

ಎಲ್ಲರೂ ಕುಳಿತು ಸಮಸ್ಯೆ ಬಗೆಹರಿಸುವ ಸಂಬಂಧ ನಾನೂ ಭಕ್ತರ ಜೊತೆ ಮಾತನಾಡುತ್ತೇನೆ. ಒಳ್ಳೆಯದಾಗುವುದಿದ್ದರೆ ಆಗಲಿ. ಈ ಸಮಸ್ಯೆ ಮುಂದುವರೆಸಬೇಕು ಎಂಬ ಆಸೆ ನಮಗೂ ಇಲ್ಲ. ಮುಂದೆ ಏನು ಮಾಡಬೇಕು ಎಂದು ತೀರ್ಮಾನ ತೆಗೆದುಕೊಳ್ಳುತ್ತೇವೆ. ಹೊರಟ್ಟಿ ಅವರು ಸರ್ವೋದಯ ಸಂಸ್ಥೆಯ ನಾಲ್ಕು ಕೇರ್ಸಗಳಿವೆ ಎಂದು ಹೇಳಿದ್ದಾರೆ. ಅವರು ಅವುಗಳನ್ನು ದಾಖಲೆ ಸಮೇತ ಬಿಡುಗಡೆ ಮಾಡಲಿ ಎಂದರು.

Edited By : Nagesh Gaonkar
Kshetra Samachara

Kshetra Samachara

03/02/2022 07:47 pm

Cinque Terre

41.71 K

Cinque Terre

1

ಸಂಬಂಧಿತ ಸುದ್ದಿ