ಹುಬ್ಬಳ್ಳಿ: ಕಳಸಾ-ಬಂಡೂರಿ ನಾಲಾ ಯೋಜನೆಗೆ ಸಂಬಂಧಿಸಿದಂತೆ 15 ದಿನಗಳಲ್ಲಿ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಮಹತ್ವದ ಸಭೆ ನಡೆಸಲಾಗುವುದು ಎಂದು ಮಾಜಿ ಶಾಸಕ, ಕಾಂಗ್ರೆಸ್ ಧುರೀಣ ಎನ್.ಎಚ್.ಕೋನರಡ್ಡಿ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾದಾಯಿ ಸಮಸ್ಯೆ ಇತ್ಯರ್ಥಕ್ಕಾಗಿ ಹುಬ್ಬಳ್ಳಿಯಲ್ಲಿ ಸಲೀಂ ಅಹ್ಮದ್, ಸತೀಶ್ ಜಾರಕಿಹೊಳಿ ಎಂ.ಬಿ ಪಾಟೀಲ್, ಶಾಸಕರು ಸೇರಿದಂತೆ ಎಲ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಸಮ್ಮುಖದಲ್ಲಿ ಮಹತ್ವದ ಸಭೆ ನಡೆಸಿ ಹೋರಾಟದ ರೂಪುರೇಷೆ ಮಾಡಿ ಆ ಯೋಜನೆ ಜಾರಿಯಾಗುವರೆಗೆ ಕಾಂಗ್ರೆಸ್ ನೇತೃತ್ವದಲ್ಲಿ ಹೋರಾಟ ಮಾಡುವುದಾಗಿ ಅವರು ಎಂದರು.
ಕನ್ನಡ ಪರ ಸಂಘಟನೆ, ರೈತ ಪರ ಸಂಘಟನೆಗಳು ಬೆಂಬಲ ಕೊಡಲಿದ್ದು, ಕಾಂಗ್ರೆಸ್ ಪಕ್ಷ ಮುಂಚೂಣಿಯಲ್ಲಿ ಹೋರಾಟ ಮಾಡಲಿದೆ. ಡಬಲ್ ಇಂಜಿನ್ ಸರ್ಕಾರ ಎಂದು ಹೇಳುವ ಬಿಜೆಪಿಗರು ಈ ಸಮಸ್ಯೆ ಬಗೆಹರಿಸಬೇಕಿದೆ ಎಂದು ಕೋನರಡ್ಡಿ ಹೇಳಿದರು.
Kshetra Samachara
07/02/2022 12:00 pm