ಕುಂದಗೋಳ : ಗ್ರಾಮ ಗ್ರಾಮಗಳು ಆಧುನಿಕತೆಯತ್ತ ಮುಂದುವರೆಯಬೇಕು ಗ್ರಾಮ ಪಂಚಾಯಿತಿ ಮಟ್ಟದಲ್ಲಿನ ಎಲ್ಲಾ ಸೌಲಭ್ಯಗಳು ಜನರಿಗೆ ದೊರೆಯಬೇಕು ಎಂದು ಕಾಂಗ್ರೆಸ್ ಮುಖಂಡ ರಮೇಶ್ ಕೊಪ್ಪದ ಹೇಳಿದರು.
ಅವರು ಕುಂದಗೋಳ ತಾಲೂಕಿನ ಕಮಡೊಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೈ ಮಾಸ್ಟ್ ದೀಪವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರ ಮನವಿ ಮೇರೆಗೆ ಗ್ರಾಮಕ್ಕೆ ಆಗಮಿಸಿ ಪೂಜೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿ ಕಮಡೊಳ್ಳಿ ಶ್ರೀ ರಾಚೋಟೇಶ್ವರ ಶ್ರೀಗಳ ಪುಣ್ಯಭೂಮಿ ಈ ಊರಲ್ಲಿ ನಿರಂತರ ಅಭಿವೃದ್ಧಿ ಕಾರ್ಯಗಳು ನಡೆಯಲಿ ಎಂದರು.
ಈ ಸಂದರ್ಭದಲ್ಲಿ ಕಮಡೊಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಚಾಲನೆ ನೀಡಿ ಹೈ ಮಾಸ್ಟ್ ದೀಪ ಅಳವಡಿಸುವ ಕಾರ್ಯಕ್ಕೆ ಸಾಕ್ಷಿಯಾದರು.
Kshetra Samachara
08/02/2022 10:21 pm