ಧಾರವಾಡ: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಈಗಾಗಲೇ ನ್ಯಾಯಾಲಯದಲ್ಲಿದೆ. ನ್ಯಾಯಾಲಯದ ತೀರ್ಪು ಬರುವವರೆಗೂ ಎಲ್ಲರೂ ಶಾಂತಿಯಿಂದ ಇರಬೇಕು. ನಾವೆಲ್ಲರೂ ಸೇರಿ ಸುಂದರ ಸಮಾಜ ನಿರ್ಮಾಣ ಮಾಡೋಣ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.
ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾಯಾಲಯದ ತೀರ್ಪು ಬರುವವರೆಗೂ ನಾವೆಲ್ಲರೂ ಕಾಯಬೇಕಷ್ಟೇ ಎಂದರು.
ಇನ್ನು ರಮೇಶ ಜಾರಕಿಹೊಳಿ ಅವರಿಗೆ ಮತ್ತೆ ಸಚಿವ ಸ್ಥಾನ ಕೊಡುವ ವಿಚಾರವಾಗಿ ಮಾತನಾಡಿದ ಅವರು, ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಪಕ್ಷದ ಮುಖ್ಯಮಂತ್ರಿಗಳು ಹಾಗೂ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ. ಇದರಲ್ಲಿ ನನ್ನ ವೈಯಕ್ತಿಕ ಅಭಿಪ್ರಾಯ ಬರುವುದಿಲ್ಲ ಎಂದರು.
ಜಲಸಂಪನ್ಮೂಲ ಇಲಾಖೆಯಲ್ಲಿ ಕೆಲಸ ಮಾಡಿದ ಗುತ್ತಿಗೆದಾರರಿಗೆ ಬಿಲ್ ಬಾಕಿ ಇದೆ. ಸಣ್ಣ ಗುತ್ತಿಗೆದಾರರಿಗೆ ಈಗಾಗಲೇ ಕೆಲವೊಂದಿಷ್ಟು ಕಡೆಗಳಲ್ಲಿ ಪೇಮೆಂಟ್ ಆಗಿದೆ. ಬಾಕಿ ಇರುವವರಿಗೆ ಶೀಘ್ರವೇ ನಮ್ಮ ಸರ್ಕಾರ ಬಿಲ್ ಬಿಡುಗಡೆ ಎಂದ
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
12/02/2022 03:26 pm