ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ: ಗಾಳಿ ಮರೆಮ್ಮದೇವಿ ದರ್ಶನ ಪಡೆದ ಸಿಎಂ ಬೊಮ್ಮಾಯಿ

ಕುಂದಗೋಳ: ರಾಜ್ಯದ ವಿವಿಧೆಡೆ ನಡೆದ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಮರಳಿ ಬೆಂಗಳೂರಿಗೆ ಹಿಂದಿರುಗುವ ಮಾರ್ಗವಾಗಿ ಕುಂದಗೋಳ ಪಟ್ಟಣಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕುಂದಗೋಳ ತಾಲೂಕಿನ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸ್ವಾಗತಿಸಿದರು.

ಈ ವೇಳೆ ಹುಬ್ಬಳ್ಳಿ ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿಯ ಗಾಳಿ ಮರೆಮ್ಮದೇವಿ ದರ್ಶನ ಪಡೆದ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪ್ರಕಾಶ್ ಕೋಕಾಟೆ ಹಾಗೂ ಸರ್ವ ಸದಸ್ಯರು ನೇತೃತ್ವದಲ್ಲಿ ಪಟ್ಟಣದ ಅಭಿವೃದ್ಧಿಗೆ ಸಹಕಾರ ನೀಡುವಂತೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರು ಸರ್ವ ಸದಸ್ಯರು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : Shivu K
Kshetra Samachara

Kshetra Samachara

13/02/2022 12:40 pm

Cinque Terre

25.77 K

Cinque Terre

0

ಸಂಬಂಧಿತ ಸುದ್ದಿ