ಹುಬ್ಬಳ್ಳಿ: ಬಿಜೆಪಿಯವರು ಹಿಂದೂ-ಮುಸ್ಲಿಂ ಅಂತ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಜಮೀರ್ ಅಹ್ಮದ ಖಾನ್ ಗಂಭೀರ ಆರೋಪ ಮಾಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ನಿನ್ನೆ ಇವತ್ತಿನದ್ದಲ್ಲ. ತುಂಬ ಹಿಂದಿನಿಂದ ನಮ್ಮ ಸಮುದಾಯದವರು ಹಿಜಾಬ್ ಹಾಕಿಕೊಂಡು ಬರುತ್ತಿದ್ದಾರೆ. ಈ ವಿವಾದವು ಸದ್ಯ ನ್ಯಾಯಲಯದಲ್ಲಿದೆ. ಹೀಗಾಗಿ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ. ಇದು ಬಿಜೆಪಿವರು ಮಾಡಿದ ರಾಜಕೀಯವಾಗಿದೆ ಎಂದು ದೂರಿದರು.
ಗೊಂದಲ ಸೃಷ್ಟಿ ಮಾಡುವುದೇ ಬಿಜೆಪಿಯವರ ಕೆಲಸವಾಗಿದೆ. ನ್ಯಾಯಾಲಯದ ತೀರ್ಪು ನಮ್ಮ ಪರವಾಗಿ ಬರುತ್ತದೆ ಎನ್ನುವ ವಿಶ್ವಾಸವಿದೆ. ಈಗಾಗಲೇ ರಾಮ ಮಂದಿರದ ತೀರ್ಪನ್ನು ಸ್ವಾಗತಿಸಿದ್ದೇವೆ, ಇದನ್ನ ಹಾಗೆಯೇ ಸ್ವಾಗತಿಸುತ್ತೇವೆ ಎಂದು ಹೇಳಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
13/02/2022 02:16 pm