ಹುಬ್ಬಳ್ಳಿ: ಸದ್ಯಕ್ಕೆ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಯೂಟರ್ನ್ ಹೊಡೆದಿದ್ದಾರೆ.
ನಗರದಲ್ಲಿ ಆಪ್ತರ ಸಭೆಯ ಬಳಿಕ ಮಾತನಾಡಿದ ಅವರು ನಾಳೆ ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ಕೊಡುವುದಾಗಿ ಹೇಳಿಕೆ ನೀಡಿದ್ದರು. ಆದರೆ ಸದ್ಯಕ್ಕೆ ನಾಳೆ ರಾಜೀನಾಮೆ ನೀಡುವುದಿಲ್ಲ ಎಂದಿದ್ದಾರೆ.
'ಕಾಂಗ್ರೆಸ್‌ನ ಹೈಕಮಾಂಡ್‌ನಿಂದ ನನಗೆ ಬುಲಾವ್ ಬಂದಿದೆ. ಹೈಕಮಾಂಡ್ ಜೊತೆ ಮಾತನಾಡಿದ ನಂತರ ಮತ್ತೆ ನಮ್ಮ ಮುಖಂಡರ ಜೊತೆ ಸಭೆ ಮಾಡುತ್ತೇನೆ. ನನ್ನನ್ನು ಪಕ್ಷದಲ್ಲಿ ಉಳಿಸಿಕೊಳ್ಳುವುದಕ್ಕೆ ಮನಸ್ಸಿದೆಯೋ ಇಲ್ಲವೋ ಅವರನ್ನೇ ಕೇಳಿ. ಹೈಕಮಾಂಡ್‌ನವರು ಏನು ಹೇಳ್ತಾರೆ ನೋಡೋಣ. ಅದರ ನಂತರ ನಾನು ಮುಖಂಡರ ಸಭೆ ಮಾಡಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇನೆ' ಎಂದು ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
13/02/2022 07:23 pm