ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: 'ಚೆಂಬೆಳಕಿನ' ಚಿಂತನೆಗಳು ನಾಡಿಗೆ ಮತ್ತೆ ದೊರಕುವಂತಾಗಲಿ; ಸಿಎಂ ಬೊಮ್ಮಾಯಿ

ಧಾರವಾಡ: ಅನಾರೋಗ್ಯದ ಕಾರಣದಿಂದ ಧಾರವಾಡದ ಎಸ್‌ಡಿಎಂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ನಾಡಿನ ಹಿರಿಯ ಕವಿ ಡಾ.ಚೆನ್ನವೀರ ಕಣವಿ ಅವರ ಆರೋಗ್ಯದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ಪಡೆದುಕೊಂಡರು.

ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಎಸ್‌ಡಿಎಂ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಕಣವಿ ಅವರ ಆರೋಗ್ಯದ ಕುರಿತು ಮಾಹಿತಿ ಪಡೆದುಕೊಂಡರು.

ಕಳೆದ ಒಂದು ತಿಂಗಳಿನಿಂದ ತೀವ್ರ ಅಸ್ವಸ್ಥರಾಗಿರುವ ಹೆಸರಾಂತ ಕವಿ ಡಾ.ಚೆನ್ನವೀರ ಕಣವಿ ಅವರಿಗೆ ಉತ್ತಮ ಚಿಕಿತ್ಸೆ ದೊರೆಯುತ್ತಿದೆ. ಸ್ವಲ್ಪಮಟ್ಟಿನ ಚೇತರಿಕೆ ಕಂಡು ಬಂದಿದೆ. ಮುಂದಿನ 3-4 ದಿನಗಳಲ್ಲಿ ಇನ್ನಷ್ಟು ಆರೋಗ್ಯ ಸುಧಾರಿಸುವ ಭರವಸೆ ಇದೆ. ಕಣವಿ ಅವರ ಚಿಂತನೆಗಳು ನಾಡಿಗೆ ಮತ್ತೆ ದೊರೆಯಬೇಕು ಎಂದು ಸಿಎಂ ಹೇಳಿದರು.

ಜಿಲ್ಲಾಧಿಕಾರಿಗಳ ಉಸ್ತುವಾರಿಯಲ್ಲಿ ಕಣವಿ ಅವರಿಗೆ ಎಸ್‌ಡಿಎಂ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ ಅವರು ಶೀಘ್ರ ಗುಣಮುಖರಾಗಿ, ಚೇತರಿಸಿಕೊಳ್ಳಲಿ ಎಂದು ಮುಖ್ಯಮಂತ್ರಿಯವರು ಹಾರೈಸಿದರು.

Edited By : Nagesh Gaonkar
Kshetra Samachara

Kshetra Samachara

13/02/2022 07:43 pm

Cinque Terre

88.23 K

Cinque Terre

0

ಸಂಬಂಧಿತ ಸುದ್ದಿ