ಹುಬ್ಬಳ್ಳಿ: ರಾಜ್ಯದಲ್ಲಿ ಈಗಾಗಲೇ ಪ್ರವಾಸ ಮಾಡುತ್ತಿದ್ದೇನೆ. ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೊಟ್ಟಂತಹ ಸೌಲಭ್ಯಗಳನ್ನು ಯಾರೂ ಕೊಟ್ಟಿಲ್ಲ ಎಂದು ಜನರೇ ಹೇಳುತ್ತಿದ್ದಾರೆ. ರಾಜ್ಯಕ್ಕೆ ಒಳ್ಳೆಯದಾಗಬೇಕಾದರೆ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2018 ರಲ್ಲಿ ತಪ್ಪು ಮಾಡಿದ್ದೆವೆ ಈ ಬಾರಿ ನಾವು ಆ ರೀತಿ ತಪ್ಪು ಮಾಡಲ್ಲ ಎಂದು ಜನರೆ ಮಾತನಾಡುತ್ತಿದ್ದಾರೆ. ಖಂಡಿತವಾಗಿ ಈ ಬಾರಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದರು.
Kshetra Samachara
13/02/2022 08:46 pm