ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಕಾಂಗ್ರೆಸ್ ಸೇರಿದ ಚೇತನ್‌ ಹಿರೇಕೆರೂರ, ಪ್ರತಿಸ್ಪರ್ಧಿ ಕ್ಯಾರಕಟ್ಟಿ ಬಿಜೆಪಿ ಸೇರ್ಪಡೆ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಪಕ್ಷೇತರ ಸದಸ್ಯ ಚೇತನ್ ಹಿರೇಕೆರೂರ ಅವರು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಮಾಜಿ ಮೇಯರ್ ಹಾಗೂ 4 ಬಾರಿ ಪಾಲಿಕೆ ಸದಸ್ಯರಾಗಿದ್ದ ಕಾಂಗ್ರೆಸ್ ಪ್ರಕಾಶ ಕ್ಯಾರಕಟ್ಟಿ ಅವರ ವಿರುದ್ಧ ಜಯ ಸಾಧಿಸಿದ ಚೇತನ್ ಹಿರೇಕೆರೂರ ಕಾಂಗ್ರೆಸ್ ಸೇರ್ಪಡೆಗೊಂಡರೆ, ಕಾಂಗ್ರೆಸ್ ತೊರೆದ ಕ್ಯಾರಕಟ್ಟಿ ಬಿಜೆಪಿ ಸೇರಿದ್ದಾರೆ.

ಪ್ರಕಾಶ ಕ್ಯಾರಕಟ್ಟಿಯವರು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಇಂತಹ ತೀರ್ಮಾನ ತೆಗೆದುಕೊಂಡಿದ್ದಾರೆಂದು ಹೇಳಲಾಗಿದೆ. ಒಟ್ಟಾರೆ, ಹುಬ್ಬಳ್ಳಿಯಲ್ಲೀಗ ಪಕ್ಷಾಂತರ ಪರ್ವ ಶುರುವಾಗಿದೆ.

ಚೇತನ್ ಅವರನ್ನು ಸನ್ಮಾನಿಸಿದ ಸಂದರ್ಭದಲ್ಲಿ ಗ್ರಾಮೀಣ ಜಿಲ್ಲಾಧ್ಯಕ್ಷ ಅನಿಲಕುಮಾರ್ ಪಾಟೀಲ್, ಮಹಾನಗರ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಲ್ತಾಪ್ ಹಳ್ಳೂರ, ವಿದ್ಯಾನಗರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ ಸೇರಿದಂತೆ ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

14/02/2022 01:05 pm

Cinque Terre

27.19 K

Cinque Terre

9

ಸಂಬಂಧಿತ ಸುದ್ದಿ