ಧಾರವಾಡ: ಹಿಜಾಬ್ ಕುರಿತು ನ್ಯಾಯಾಲಯದ ಮಧ್ಯಂತರ ಆದೇಶ ಇದ್ದರೂ ಅದನ್ನು ಪಾಲಿಸುತ್ತಿಲ್ಲ. ನ್ಯಾಯಾಲಯದ ಆದೇಶ ಪಾಲಿಸದವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಶ್ರೀರಾಮ ಸೇನೆ ಕಾರ್ಯಕರ್ತರು ಗುರುವಾರ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಹಿಜಾಬ್ ವಿಷಯವಾಗಿ ಈಗಾಗಲೇ ನ್ಯಾಯಾಲಯ, ಶಾಲೆಗಳಲ್ಲಿ ಯಾವುದೇ ಧರ್ಮದ ಗುರುತುಗಳ ಪ್ರದರ್ಶನಕ್ಕೆ ಅವಕಾಶ ಇಲ್ಲ ಎಂದು ಮಧ್ಯಂತರ ಆದೇಶ ನೀಡಿದೆ. ಆದರೆ, ಮುಸ್ಲಿಂ ವಿದ್ಯಾರ್ಥಿನಿಯರು ನ್ಯಾಯಾಲಯದ ಆದೇಶ ಉಲ್ಲಂಘಿಸುತ್ತಿದ್ದಾರೆ. ಅಂತವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳಿಗೆ ಶ್ರೀರಾಮ ಸೇನೆ ಕಾರ್ಯಕರ್ತರು ಹೋಗಬೇಕಾಗುತ್ತದೆ ಎಂದು ಶ್ರೀರಾಮ ಸೇನೆ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಹೇಳಿದರು.
ಹಿಜಾಬ್ ಧರಿಸಿ ಶಾಲೆಗೆ ಬರುತ್ತಿರುವ ವಿದ್ಯಾರ್ಥಿಗಳನ್ನು ಶಾಲೆಯಿಂದ ಸಸ್ಪೆಂಡ್ ಮಾಡಬೇಕು ಎಂದು ಶ್ರೀರಾಮ ಸೇನೆ ಕಾರ್ಯಕರ್ತರು ಒತ್ತಾಯಿಸಿದರು.
Kshetra Samachara
17/02/2022 04:57 pm