ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: 'ಪಂಚಮಸಾಲಿ ಸಮುದಾಯ 2ಎಗೆ ಸೇರಿಸಬೇಡಿ'

ಹುಬ್ಬಳ್ಳಿ: ಕರ್ನಾಟಕ ರಾಜ್ಯ ಕಾಯಕ ಸಮಾಜಗಳ ಒಕ್ಕೂಟದ ವ್ಯಾಪ್ತಿಯಲ್ಲಿ 102 ಜನಾಂಗಗಳು ಒಳಪಡುತ್ತವೆ. ಈ ಎಲ್ಲ ಸಮಾಜಗಳ ಅಭಿವೃದ್ಧಿಗಾಗಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರಕ್ಕೆ ಒತ್ತಾಯಿಸುತ್ತೇವೆ ಎಂದು ವಿ.ಪ ಮಾಜಿ ಸದಸ್ಯ ಹಾಗೂ ಒಕ್ಕೂಟದ ರಾಜ್ಯಾಧ್ಯಕ್ಷ ಕೆ.ಸಿ.ಪಟ್ಟಣಶೆಟ್ಟಿ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಒಕ್ಕೂಟದಲ್ಲಿ 102 ಜನಾಂಗಗಳನ್ನು ಒಳಗೊಂಡಿದೆ. ಆದರೆ ಮುಂದುವರಿದ ಪಂಚಮಸಾಲಿ ಸಮುದಾಯವನ್ನು 2-ಎ ಗೆ ಸೇರಿಸಬಾರದು. ಸ್ಥಳೀಯ ಸಂಸ್ಥೆಗಳಿಗೆ ಹಿಂದುಳಿದ ವರ್ಗಗಳಿಗೆ ಈಗಿರುವ ಶೇ 28ರಷ್ಟು ಮೀಸಲಾತಿ ಕಾಯ್ದಿರಿಸಬೇಕು ಎಂದು ಆಗ್ರಹಿಸಿದ್ದಾರೆ.

ಕಾಯಕ ಸಮಾಜಗಳ ಅಭಿವೃದ್ಧಿಗೆ ಪ್ರಾಧಿಕಾರ ರಚಿಸಿ ಪ್ರಸಕ್ತ ಬಜೆಟನಲ್ಲಿ ಕನಿಷ್ಠ 1,000 ಕೋಟಿ ರೂ. ಅನುದಾನ ನೀಡಬೇಕು. ಪ್ರತಿ ತಾಲೂಕು ಮತ್ತು ಜಿಲ್ಲೆಗಳು ಕೌಶಲ್ಯ ಅಭಿವೃದ್ಧಿ ಕೇಂದ್ರಗಳನ್ನು ತೆರೆಯಬೇಕು. ಉತ್ತರ ಕರ್ನಾಟಕದಲ್ಲಿ ನೀಡುತ್ತಿರುವ ಮೀಸಲಾತಿ ಸೌಲಭ್ಯಗಳಲ್ಲಿನ ತಾರತಮ್ಯ ಸರಿಪಡಿಸಬೇಕು. ಗುಡಿ ಕೈಗಾರಿಕೆಗಳ ಅಭಿವೃದ್ಧಿಗೆ ಉಚಿತ ಭೂಮಿ ನೀರು, ವಿದ್ಯುಚ್ಛಕ್ತಿ ಮತ್ತು ಶೇ 90ರಷ್ಟು ಸಬ್ಸಿಡಿ ದರದಲ್ಲಿ ಬಡ್ಡಿ ರಹಿತ ಸಾಲ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಒತ್ತಾಯಿಸಿದರು.

Edited By : Manjunath H D
Kshetra Samachara

Kshetra Samachara

17/02/2022 09:45 pm

Cinque Terre

18.2 K

Cinque Terre

7

ಸಂಬಂಧಿತ ಸುದ್ದಿ