ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಕೆ.ಎಸ್.ಈಶ್ವರಪ್ಪ ಪ್ರತಿಕೃತಿ ದಹಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಕಿಡಿ

ಧಾರವಾಡ: ಸಚಿವ ಕೆ.ಎಸ್ ಈಶ್ವರಪ್ಪ ಅವರು ಕೆಂಪುಕೋಟೆಯ ಮೇಲೆ ಕೇಸರಿ ಧ್ವಜ ಹಾರಿಸುತ್ತೇನೆ ಎಂಬ ಹೇಳಿಕೆ ಖಂಡಿಸಿ, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ಇಂದು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಕೆ.ಎಸ್ ಈಶ್ವರಪ್ಪ ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಅವರು, ವಿವಾದಾತ್ಮಕ ಹೇಳಿಕೆ ನೀಡಿದ ಸಚಿವರ ಮೇಲೆ ರಾಜ್ಯ ಸರಕಾರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಅಷ್ಟೇ ಅಲ್ಲದೆ ಅವರನ್ನು ಸಂಪುಟ ದರ್ಜೆಯಿಂದ ವಜಾ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಅಬ್ದುಲ್ ದೇಸಾಯಿ, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಜಾಲತಾಣದ ಮುಂಬೈ-ಕರ್ನಾಟಕ ಉಸ್ತುವಾರಿ ನಾಗಾರ್ಜುನ್ ಕತ್ರಿಮಲ್, ಕಾರ್ಯದರ್ಶಿ ಬಾಬು ಗೌಳಿ, ಸುನಿಲ್ ಸಿಂಧೆ, ಸಂತೋಷ್ ನಾಯಕ್, ಕಾಶಿಂ ಕೂಡ್ಲಿಗಿ, ಎನ್.ಎಸ್ ಯು.ಐ ಕಾರ್ಯದರ್ಶಿ ಫೈರೋಜ್ ಪಟಾನ್ ಇದ್ದರು.

Edited By : Nagesh Gaonkar
Kshetra Samachara

Kshetra Samachara

18/02/2022 06:06 pm

Cinque Terre

38.64 K

Cinque Terre

20

ಸಂಬಂಧಿತ ಸುದ್ದಿ