ಹುಬ್ಬಳ್ಳಿ: ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ ಜನಾಂದೋಲನಗಳ ಮಹಾಮೈತ್ರಿ ನೇತೃತ್ವದಲ್ಲಿ ಮಾ.1 ರಿಂದ 15ರವರೆಗೆ ಬಸವ ಕಲ್ಯಾಣದಿಂದ ಬೆಂಗಳೂರುವರೆಗೆ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜ ಪರಿವರ್ತನ ಸಮುದಾಯದ ಸಂಚಾಲಕ ಎಸ್.ಆರ್.ಹಿರೇಮಠ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 'ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಜಾರಿಗೊಳಿಸುದಿಲ್ಲ ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ. ಆದರೂ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಮಾತ್ರ ಈ ಕಾಯಿದೆಗಳನ್ನು ರದ್ದುಗೊಳಸಿಲು ಹಿಂದೆಟ್ಡು ಹಾಕುತ್ತಿರುವುದು ಯಾಕೆ? ಮುಂದಿನ ದಿನಗಳಲ್ಲಿ ಈ ಕಾಯ್ದೆಗಳನ್ನು ಅನುಷ್ಠಾನಗೊಳಿಸಿ ರೈತರಿಗೆ ಅನ್ಯಾಯ ಮಾಡುವ ಹುನ್ನಾರ ರಾಜ್ಯ ಸರ್ಕಾರದ್ದಾಗಿದೆ' ಎಂದು ದೂರಿದರು.
ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಮಹಾಮೈತ್ರಿಯು ಜಾಥಾ ಹಮ್ಮಿಕೊಂಡಿದ್ದು, ಮಾರ್ಚ್ 15ಕ್ಕೆ ಬೆಂಗಳೂರಿನಲ್ಲಿ ಸಂಪನ್ನಗೊಳಲಿದೆ. ಈ ಮಧ್ಯೆ ಆಯಾ ಜಿಲ್ಲೆಯ ಶಾಸಕರಿಗೆ ಕಾಯ್ದೆಯ ತಿಳುವಳಿಕೆ ಕರಪತ್ರಗಳನ್ನು ಹಂಚಿ ಅವರ ಪರ ಮತ್ತು ವಿರೋಧ ಅಭಿಪ್ರಾಯಗಳನ್ನು ಪಡೆಯಲಾಗುತ್ತದೆ. ಹುಬ್ಬಳ್ಳಿಯಲ್ಲಿ ಮಾ. 7ರಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಶಾಸಕ ಅರವಿಂದ ಬೆಲ್ಲದ ಅವರ ಮನೆಯ ಮುಂದೆ ಜಾಥಾ ನಡೆಸಿ ಅಭಿಪ್ರಾಯ ತಿಳಿದು ಕಾಯ್ದೆಗಳನ್ನು ರದ್ದುಗೊಳಿಸುವಂತೆ ಸರ್ಕಾರಕ್ಕೆ ಸಲಹೆ ನೀಡಲು ಒತ್ತಾಯಿಸುದಾಗಿ ತಿಳಿಸಿದರು.
Kshetra Samachara
21/02/2022 02:45 pm