ನವಲಗುಂದ : ರಾಷ್ಟ್ರ ಧ್ವಜದ ಬಗ್ಗೆ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿಕೆ ಖಂಡಿಸಿ, ಮಂತ್ರಿ ಮಂಡಲದಿಂದ ವಜಾ ಮಾಡಬೇಕೆಂದು ನವಲಗುಂದ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರಿಂದ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು.
ಹೌದು ಸಚಿವ ಕೆ.ಎಸ್ ಈಶ್ವರಪ್ಪ ಇತ್ತೀಚೆಗೆ ಕೆಂಪು ಕೋಟೆಯ ಮೇಲಿನ ರಾಷ್ಟ್ರ ಧ್ವಜದ ಬಗ್ಗೆ ದೇಶದ್ರೋಹದ ಹೇಳಿಕೆ ನೀಡಿದ್ದು, ಪ್ರಜಾ ಪ್ರಭುತ್ವ ವಿರೋಧಿ ನೀತಿ ಅನುಸರಿಸಿದ್ದಾರೆ. ಈ ಹಿನ್ನೆಲೆ ಅವರನ್ನು ಮಂತ್ರಿ ಮಂಡಲದಿಂದ ವಜಾ ಮಾಡಬೇಕೆಂದು ಕಾಂಗ್ರೇಸ್ ಮುಖಂಡರ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ, ತಹಶೀಲ್ದಾರ ಮೂಲಕ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ನವಲಗುಂದ ಪುರಸಭೆ ಅಧ್ಯಕ್ಷ ಮಂಜುನಾಥ ಜಾಧವ, ಪುರಸಭೆ ಸದಸ್ಯರುಗಳಾದ ಜೀವನ ಪವಾರ, ಪ್ರಕಾಶ ಶಿಗ್ಲಿ, ಅಪ್ಪಣ್ಣ ಹಳ್ಳದ, ಶಿವಾನಂದ ತಡಸಿ, ಮಹಾಂತೇಶ ಭೋವಿ, ಆರ್.ಹೆಚ್. ಕೋನರಡ್ಡಿ, ಸುಲೇಮಾನ ನಾಶಿಪುಡಿ, ಮಹಿಳಾ ಘಟಕದ ಅಧ್ಯಕ್ಷೆ ವೆಂಕಮ್ಮಾ ಚಾಕಲಬ್ಬಿ, ನಂದಿನಿ ಹಾದಿಮನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Kshetra Samachara
21/02/2022 10:16 pm