ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಈಶ್ವರಪ್ಪ ಪ್ರತಿಕೃತಿ ದಹನ, ರಾಷ್ಟ್ರಧ್ವಜ ಹಿಡಿದು ಕೈ ಮುಖಂಡರ ಹೋರಾಟ

ಕುಂದಗೋಳ : ರಾಷ್ಟ್ರಧ್ವಜದ ಸ್ಥಾನದಲ್ಲಿ ಕೇಸರಿ ಧ್ವಜ ಹಾರಿಸುವ ಹೇಳಿಕೆ ನೀಡಿದ ಗ್ರಾಮಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪನವರ ಹೇಳಿಕೆಯನ್ನು ಖಂಡಿಸಿ ಕುಂದಗೋಳ ತಾಲೂಕಿನ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಗಾಳಿಮರೇಮ್ಮದೇವಿ ದೇವಸ್ಥಾನದಿಂದ ತಹಶೀಲ್ದಾರ ಕಚೇರಿವರೆಗೆ ಪಾದಯಾತ್ರೆ ಕೈಗೊಂಡು ಸಚಿವರನ್ನು ಸಂಪುಟದಿಂದ ಕೈ ಬಿಡುವಂತೆ ಒತ್ತಾಯ ಮಾಡಿದರು.

ಗಾಳಿ ಮರೆಮ್ಮದೇವಿ ದೇವಸ್ಥಾನದಿಂದ ಆರಂಭವಾದ ಪ್ರತಿಭಟನೆಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪನವರ ಪ್ರತಿಕೃತಿ ಮೆರವಣಿಗೆ ಮಾಡಿ ಬಳಿಕ ಬಸ್ ನಿಲ್ದಾಣ ವೃತ್ತದಲ್ಲಿ ಪ್ರತಿಕೃತಿ ದಹಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಇನ್ನೂ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಕೈಗೊಂಡ ಪ್ರತಿಭಟನೆ ತಹಶೀಲ್ದಾರ ಕಚೇರಿ ತಲುಪಿದ ಮೇಲೆ ರಾಷ್ಟ್ರಧ್ವಜ ಪ್ರದರ್ಶನ ಮಾಡಿ ತಹಶೀಲ್ದಾರ್ ಗೆ ಮನವಿ ಸಲ್ಲಿಸಿ ಕೇಸರಿ ಧ್ವಜ ಹಾರಿಸುವ ಹೇಳಿಕೆಗೆ ಟಾಂಗ್ ನೀಡಿದರು. ಈ ಸಂದರ್ಭದಲ್ಲಿ ಕುಂದಗೋಳ ತಾಲೂಕಿನ ಸರ್ವ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Edited By : Nagesh Gaonkar
Kshetra Samachara

Kshetra Samachara

22/02/2022 11:43 am

Cinque Terre

22.12 K

Cinque Terre

2

ಸಂಬಂಧಿತ ಸುದ್ದಿ