ಧಾರವಾಡ: ಶಿವಮೊಗ್ಗದಲ್ಲಿ ಭಾನುವಾರ ರಾತ್ರಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯನ್ನು ಖಂಡಿಸಿ ಭಾವಸಾರ ಕ್ಷತ್ರೀಯ ಸ್ಥಾನಿಕ ಪಂಚ ಕಮೀಟಿ ಕಾರ್ಯಕರ್ತರು ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಬಜರಂಗದಳ ಕಾರ್ಯಕರ್ತ ಹರ್ಷ ಅವರನ್ನು ಹತ್ಯೆ ಮಾಡಿದ ಆರೋಪಿಗಳನ್ನು ತಕ್ಷಣ ಬಂಧಿಸಿ, ಗಲ್ಲು ಶಿಕ್ಷೆ ವಿಧಿಸಬೇಕು. ಅಲ್ಲದೆ ಮುಸ್ಲಿಂ ಸಂಘಟನೆಯಾದ ಪಿಎಫ್ಐ ಸಂಘಟನೆಗಳ ವಿರುದ್ಧ ಭಾವಸಾರ ಕ್ಷತ್ರೀಯ ಸ್ಥಾನಿಕ ಪಂಚ ಕಮೀಟಿ ಪ್ರತಿಭಟನೆಕಾರರು ಧಿಕ್ಕಾರ ಕೂಗಿ ಸಂಘಟನೆಗಳನ್ನು ಬ್ಯಾನ್ ಮಾಡುವಂತೆ ಆಗ್ರಹಿಸಿದರು.
ಶಿವಮೊಗ್ಗ ಜಿಲ್ಲೆಯಲ್ಲಿ ಹರ್ಷ ಸಾವಿಗೆ ನ್ಯಾಯ ಸಿಗಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು. ಬಳಿಕ ಹರ್ಷಾ ಹತ್ಯೆ ಆರೋಪಿಗಳಿಗೆ ಶಿಕ್ಷೆ ನೀಡುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
Kshetra Samachara
22/02/2022 01:04 pm