ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಮುಸ್ಲಿಂ ಸಂಘಟನೆಗಳ ಪ್ರತಿಕೃತಿ ದಹಿಸಿದ ಶ್ರೀರಾಮ ಸೇನೆ

ಧಾರವಾಡ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯನ್ನು ಖಂಡಿಸಿ ಶ್ರೀರಾಮ ಸೇನೆ ಕಾರ್ಯಕರ್ತರು ಧಾರವಾಡದ ವಿವೇಕಾನಂದ ವೃತ್ತದಲ್ಲಿ ಎಸ್‌ಡಿಪಿಐ, ಪಿಎಫ್‌ಐ ಹಾಗೂ ಐಸಿಎಫ್‌ಐ ಸಂಘಟನೆಗಳ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಧಾರವಾಡ ವಿವೇಕಾನಂದ ವೃತ್ತದಲ್ಲಿ ಜಮಾಯಿಸಿದ ಶ್ರೀರಾಮ ಸೇನೆ ಕಾರ್ಯಕರ್ತರು ಹಿಂದೂ ಕಾರ್ಯಕರ್ತರ ಹತ್ಯೆಯನ್ನು ತೀವ್ರವಾಗಿ ಖಂಡಿಸಿ, ರಾಜ್ಯ ಸರ್ಕಾರ ಕೂಡಲೇ ಎಸ್‌ಡಿಪಿಐ, ಪಿಎಫ್ಐ ಸಂಘಟನೆಗಳನ್ನು ನಿಷೇಧ ಮಾಡಬೇಕು ಎಂದು ಒತ್ತಾಯಿಸಿದರು.

ಹಿಂದೂ ವಿರೋಧಿ ಪಟ್ಟವನ್ನು ರಾಜ್ಯದಲ್ಲಿ ಇರುವ ಬಿಜೆಪಿ ಸರ್ಕಾರ ಕಟ್ಟಿಕೊಳ್ಳುತ್ತಿದ್ದು, ಈ ಕೂಡಲೇ ಹಿಂದೂ ಕಾರ್ಯಕರ್ತರ ಕೊಲೆ ಪ್ರಕರಣ ಗಂಭೀರವಾಗಿ ಪರಿಗಣಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಈ ಪ್ರತಿಭಟನೆಯಲ್ಲಿ ಶ್ರೀರಾಮ ಸೇನೆ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ, ತಾಲೂಕು ಅಧ್ಯಕ್ಷ ಮೈಲಾರ ಗುಂಡಪ್ಪನವರ, ಹನುಮಂತ, ಮಾರುತಿ, ಮಂಜುನಾಥ, ಪಾಂಡು ಯಮೋಜಿ, ಮಲ್ಲಿಕಾರ್ಜುನ ಸೇರಿದಂತೆ ಶ್ರೀರಾಮ ಸೇನೆ ಕಾರ್ಯಕರ್ತರು ಪಾಲ್ಗೊಂಡಿದ್ದರು.

Edited By : Nagesh Gaonkar
Kshetra Samachara

Kshetra Samachara

22/02/2022 01:25 pm

Cinque Terre

21.9 K

Cinque Terre

0

ಸಂಬಂಧಿತ ಸುದ್ದಿ