ಕುಂದಗೋಳ: ತಾಲೂಕಿನ ಯರಗುಪ್ಪಿಯಲ್ಲಿ ಕುರಿಗಾಹಿ ಮಹಿಳೆಯ ಅತ್ಯಾಚಾರ ಕೊಲೆ ಪ್ರಕರಣ ಹಾಗೂ ಶಿವಮೊಗ್ಗದಲ್ಲಿ ಭಾನುವಾರ ನಡೆದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳದ ಕಾರ್ಯಕರ್ತರು ಇಂದು ಕುಂದಗೋಳದಲ್ಲಿ ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿ ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಿಸಿ ಘೋಷಣೆ ಕೂಗಿದ ಕಾರ್ಯಕರ್ತರು, ಗಾಳಿ ಮರೆಮ್ಮದೇವಿ ದೇವಸ್ಥಾನದಿಂದ ತಹಶೀಲ್ದಾರ್ ಕಚೇರಿವರೆಗೆ ಪಾದಯಾತ್ರೆ ಕೈಗೊಂಡರು. ಬಳಿಕ ತಹಶೀಲ್ದಾರ್ ಅಶೋಕ್ ಶಿಗ್ಗಾಂವಿ ಅವರಿಗೆ ಮುಸ್ಲಿಂ ಸಂಘಟನೆಗಳಾದ ಪಿಎಫ್ಐ ಮತ್ತು ಎಸ್‌ಡಿಪಿಐ ನಿಷೇಧ ಮಾಡುವಂತೆ ಮನವಿ ಸಲ್ಲಿಸಿದರು.
ಯರಗಪ್ಪಿ ಕೊಲೆ ಪ್ರಕರಣದ ಬಗ್ಗೆ ಸ್ಥಳೀಯ ಶಾಸಕಿ ಒಂದು ಮಾತು ಆಡಿಲ್ಲ, ಒಬ್ಬ ಹಿಂದೂ ಕಾರ್ಯಕರ್ತನ ಹತ್ಯೆಗೆ ನೂರು ಬಲಿ ನಾವು ತೆಗೆದುಕೊಳ್ಳತ್ತೇವೆ. ಹಿಂದೂಗಳು ರಕ್ಷಣೆಗಾಗಿ ಮನೆಯಲ್ಲಿ ತಲ್ವಾರ್ ಇಡಿ' ಎಂದು ಬಜರಂಗದಳದ ಜಿಲ್ಲಾ ಸಂಚಾಲಕ ಶಿವಾನಂದ ಸತ್ತಿಗೇರಿ ಪ್ರತಿಭಟನೆ ಸಂದರ್ಭ ಆಕ್ರೋಶ ವ್ಯಕ್ತಪಡಿಸಿದರು
Kshetra Samachara
22/02/2022 04:48 pm