ನವಲಗುಂದ: ಶಿವಮೊಗ್ಗದಲ್ಲಿ ನಡೆದ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಖಂಡಿಸಿ ಪಟ್ಟಣದಲ್ಲಿ ಶ್ರೀ ಹನುಮಾನ್ ಶಕ್ತಿ ಜಾಗರಣಾ ಸಮಿತಿ ವತಿಯಿಂದ ಗುರುವಾರ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು.
ಶ್ರೀ ಹನುಮಾನ್ ಶಕ್ತಿ ಜಾಗರಣಾ ಸಮಿತಿ ಸೇರಿದಂತೆ ವಿವಿಧ ಹಿಂದೂ ಪರ ಸಂಘಟನೆಗಳಿಂದ ಪಟ್ಟಣದಲ್ಲಿನ ಗಣಪತಿ ದೇವಸ್ಥಾನದಿಂದ ತಾಲೂಕಾ ಆಡಳಿತ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಈ ವೇಳೆ ಆರೋಪಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ ಹಿಂದೂ ಕಾರ್ಯಕರ್ತರು ಕೆಲ ಕಾಲ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ, ನಂತರ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಪಟ್ಟಣದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
Kshetra Samachara
24/02/2022 03:20 pm