ಹುಬ್ಬಳ್ಳಿ: ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆಯಾದ ನಂತರ ಸಚಿವ ಕೆ.ಎಸ್ ಈಶ್ವರಪ್ಪ," ಈ ಕೊಲೆಗೆ ಮುಸಲ್ಮಾನ್ ಗುಂಡಾಗಳೇ ಕಾರಣ" ಎಂಬ ಹೇಳಿಕೆಯನ್ನು ನೀಡಿದ್ದರು.ಇದನ್ನು ಖಂಡಿಸಿ ಎಸ್.ಡಿ.ಪಿ.ಐ ಸಂಘಟನೆಯ ವತಿಯಿಂದ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮುಸಲ್ಮಾನ ಸಮುದಾಯದ ಬಗ್ಗೆ ಸಚಿವ ಈಶ್ವರಪ್ಪ ಈ ರೀತಿ ಅವಹೇಳನಕಾರಿ ಹೇಳಿಕೆ ನೀಡಿದ್ದು ಖಂಡನೀಯವಾಗಿದೆ. ಕೋಮು ಗಲಭೆಗೆ ಉರಿಯುವ ತುಪ್ಪಕ್ಕೆ ಬೆಂಕಿಯನ್ನು ಸುರಿದಂತಾಗಿದೆ. ಈ ಕೂಡಲೇ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು. ಅಲ್ಲದೇ ಅವರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಇನ್ನೂ ಸೋಶಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಪ್ ಇಂಡಿಯಾ ಹುಬ್ಬಳ್ಳಿ ಘಟಕದ ವತಿಯಿಂದ ತಹಶೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಈ ಘಟನೆಯನ್ನು ಖಂಡಸಿ,ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಮನವಿ ಸಲ್ಲಿಸಲಾಯಿತು.
Kshetra Samachara
26/02/2022 02:43 pm