ಕುಂದಗೋಳ: ಕಳೆದ ಎರೆಡು ವರ್ಷದ ಅತಿವೃಷ್ಟಿ ಹಾಗೂ ಕೋವಿಡ್ ವೈರಸ್ ಪರಿಣಾಮದಿಂದ ರೈತರು ಬಡ ಮಧ್ಯಮ ವರ್ಗದವರ ಬದುಕು ಸಂಕಷ್ಟದಲ್ಲಿದೆ. ಇಂತಹ ಸಂದರ್ಭದಲ್ಲಿ ರಾಜ್ಯವನ್ನಾಳುವ ಜನಪ್ರತಿನಿಧಿಗಳು ತಮ್ಮ,ತಮ್ಮ ವೇತನ ಹೆಚ್ಚಳ ನಿರ್ಧಾರ ಕೈ ಬಿಡುವಂತೆ ಒತ್ತಾಯಿಸಿ ತಹಶೀಲ್ದಾರ ಮೂಲಕ ರಾಜ್ಯಪಾಲರಿಗೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮನವಿ ಸಲ್ಲಿಸಿದರು.
ತಹಶೀಲ್ದಾರ ಕಚೇರಿಯಲ್ಲಿ ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು, ಜನಪ್ರತಿನಿಧಿಗಳು ರಾಜಕೀಯ ನಾಯಕರು ತಮ್ಮ ವೇತನ ಹೆಚ್ಚಳ ಕೈ ಬಿಟ್ಟು ಅತಿವೃಷ್ಟಿ ಸಂಕಷ್ಟದಲ್ಲಿರುವ ರೈತರಿಗೆ ಪ್ರತಿ ಹೆಕ್ಟರ್'ಗೆ 50 ಸಾವಿರ ರೂಪಾಯಿ ಪರಿಹಾರ ನೀಡುವಂತೆ ಒತ್ತಾಯಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಹಾಗೂ ಪಟ್ಟಣದ ಕಾರ್ಯಕರ್ಯರು ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ರಾಜ್ಯಪಾಲರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
Kshetra Samachara
26/02/2022 06:47 pm