ಧಾರವಾಡ: ಶಿವಮೊಗ್ಗದ ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷಾ ಅವರ ಕೊಲೆ ಪ್ರಕರಣವನ್ನು ಖಂಡಿಸಿ ಧಾರವಾಡದಲ್ಲಿ ಹಿಂದೂ ಕಾರ್ಯಕರ್ತರು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.
ನಾಳೆ ಸಂಜೆ 4ಕ್ಕೆ ಧಾರವಾಡದ ಕಡಪಾ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು, ಅದಕ್ಕಾಗಿ ವೇದಿಕೆ ಕೂಡ ಸಿದ್ಧಗೊಂಡಿದೆ.
ದೊಡ್ಡಮಟ್ಟದಲ್ಲಿ ಈ ಸಮಾವೇಶ ನಡೆಯಲಿದ್ದು, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶಾಸಕ ಅಮೃತ ದೇಸಾಯಿ ಸೇರಿದಂತೆ ವಿವಿಧ ಮಠಾಧೀಶರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮಾವೇಶದ ಮುನ್ನಾ ದಿನವಾದ ಶನಿವಾರ ಸಂಜೆ ಕಡಪಾ ಮೈದಾನಕ್ಕೆ ಭೇಟಿ ಕೊಟ್ಟ ಶಾಸಕ ಅಮೃತ ದೇಸಾಯಿ ಅವರು ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಿದರು.
ದೊಡ್ಡ ಸಂಖ್ಯೆಯಲ್ಲಿ ಸಮಾವೇಶದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ.
Kshetra Samachara
26/02/2022 09:31 pm