ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಜ್ಯದ ಅಭಿವೃದ್ದಿಗೆ ಕೋಟಿ ಕೋಟಿ ಅನುದಾನ ನೀಡಿದೆ. ಏಕಪಥ ರಸ್ತೆಯನ್ನ ಷಟ್ಪಥ ರಸ್ತೆಯನ್ನಾಗಿ ನಿರ್ಮಿಸುತ್ತಿದ್ದೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ. ಹೇಳಿದರು.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ರಸ್ತೆಗಳ ಅಭಿವೃದ್ಧಿಗಾಗಿ ಅನುದಾನ ರಾಜ್ಯಕ್ಕೆ ಬಂದಿದೆ. ಇದು ಐತಹಾಸಿಕ. ಇಂದು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹಲವು ಕಾಮಗಾರಿಗಳ ಶಂಕು ಸ್ಥಾಪನೆ ಮಾಡಲಿದ್ದಾರೆ. ಬೊಮ್ಮಾಯಿ ಅವರ ಆಗ್ರಹದಿಂದ ಈ ರೀತಿ ಅನುದಾನ ಬರುತ್ತಿದೆ. ಸಿಎಂ ಬೊಮ್ಮಾಯಿ ಮತ್ತು ನಾವು ಸ್ನೇಹಿತರು ಹೀಗಾಗಿ ನಮ್ಮ ಮನೆಗೆ ಉಪಹಾರಕ್ಕಾಗಿ ಬಂದಿದ್ದಾರೆ. ಬಂದಿದ್ದಾರೆ. ಇದರಲ್ಲಿ ಏನೂ ವಿಶೇಷತೆ ಇಲ್ಲ. ಇಲ್ಲಿಂದ ಎಲ್ಲರೂ ಬೆಳಗಾವಿಗೆ ಹೋಗುತ್ತಿದ್ದೆವೆ. ರಾಜ್ಯದ ಪರವಾಗಿ ಗಡ್ಕರಿ ಅವರನ್ನು ಅಭಿನಂದನೆ ಸಲ್ಲಿಸುತ್ತೇವೆ ಎಂದರು.
Kshetra Samachara
28/02/2022 12:17 pm