ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಸಂಪುಟ ವಿಸ್ತರಣೆ ಬಗ್ಗೆ ವರಿಷ್ಟರೊಂದಿಗೆ ಚರ್ಚಿಸಿ ತೀರ್ಮಾನ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ. ಈ ಬಗ್ಗೆ ಎಲ್ಲ ನಿರ್ಧಾರ ವರಿಷ್ಠರಿಗೆ ಬಿಟ್ಟಿದ್ದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನಿವಾಸಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಕೇಂದ್ರ ಸಚಿವರೊಂದಿಗೆ ಉಪಹಾರ ಸೇವನೆತಿಂಡಿ ತಿನ್ನುವುದು ಬಹಳ ಆನಂದಮಯ ಇರುತ್ತದೆ. ರಾಜಕೀಯದ ಬಗ್ಗೆ ಚರ್ಚೆ ಮಾಡೋಕೆ ಸಂದರ್ಭ ಇರುತ್ತದೆ ಎಂದ ಅವರು ನಮ್ಮ ವರಿಷ್ಠರ ಜೊತೆ ಚರ್ಚಿಸಿ ಸಂಪುಟ ವಿಸ್ತರಣೆ ಮಾಡುತ್ತೇವೆ ಎಂದರು.

ಬಸವರಾಜ ಹೊರಟ್ಟಿ ಬಿಜೆಪಿ ಸೇರುವ ವಿಚಾರವಾಗಿ ಮಾತನಾಡಿದ ಸಿಎಂ, ಹೊರಟ್ಟಿಯವರು ಬಹಳ ಅನುಭವಿ ರಾಜಕಾರಣಿ. ಸಭಾಪತಿಯಾಗಿ ಕೆಲಸ‌ ಮಾಡಿದ್ದಾರೆ. ಅವರ ರಾಜಕೀಯ ನಡೆ ಬಗ್ಗೆ ಮಾತನಾಡೋದು ಸರಿಯಲ್ಲ. ಅವರು ಎಲ್ಲಿಯೂ ಆ ಬಗ್ಗೆ ಇನ್ನೂ ಬಹಿರಂಗ ಹೇಳಿಕೆ‌ ನೀಡಿಲ್ಲ. ಅವರು ಸೂಕ್ತವಾದ ನಿರ್ಧಾರ ತಗೆದುಕೊಳ್ತಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

Edited By : Shivu K
Kshetra Samachara

Kshetra Samachara

28/02/2022 02:14 pm

Cinque Terre

22.89 K

Cinque Terre

1

ಸಂಬಂಧಿತ ಸುದ್ದಿ