ಧಾರವಾಡ: ರಾಜ್ಯ ಬಜೆಟ್‌ನಲ್ಲಿ ಅಕ್ಷರ ದಾಸೋಹ ಕಾರ್ಮಿಕರ ವೇತನ ಹೆಚ್ಚಳಕ್ಕೆ ತೀರ್ಮಾನ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕರ ಸಂಘದವರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ರಾಜ್ಯದಾದ್ಯಂತ ಶಾಲೆಗಳಲ್ಲಿರುವ ಮಕ್ಕಳಿಗೆ ಬಿಸಿಯೂಟ ನೀಡುವ ಸಿದ್ಧಪಡಿಸಿ, ಉಣಬಡಿಸುವ ಮೂಲಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಬಿಸಿಯೂಟ ಯೋಜನೆಯನ್ನು ಯಶಸ್ವಿಯಾಗಿ ಮುಂದುವರೆಸತ್ತಿರುವವರೇ ಅಕ್ಷರ ದಾಸೋಹದ ಕಾರ್ಮಿಕರು. ಸರ್ಕಾರ ಅಡುಗೆಯವರಿಗೆ 2700 ಹಾಗೂ ಸಹಾಯಕರಿಗೆ 2600 ಮಾತ್ರ ಮಾಸಿಕ ವೇತನ ನೀಡಲಾಗುತ್ತಿದೆ. ಇಂತಹ ಕಷ್ಟದ ದಿನಗಳಲ್ಲಿ ಇಷ್ಟೊಂದು ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಅಸಾಧ್ಯ. ಹೀಗಾಗಿ ಬಜೆಟ್‌ನಲ್ಲಿ ಇವರ ವೇತನ ಹೆಚ್ಚಳದ ಬಗ್ಗೆ ಪ್ರಸ್ತಾಪ ಮಾಡಬೇಕು. ಬಾಕಿ ಇರುವ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು, ನಿವೃತ್ತಿಯಾದವರಿಗೂ ಪಿಂಚಣಿ ಸೌಲಭ್ಯ ನೀಡಬೇಕು ಹಾಗೂ ಬಿಸಿಯೂಟ ಕಾರ್ಮಿಕರಿಗೆ ಅಗತ್ಯ ಸಮವಸ್ತ್ರ, ಗುರುತಿನ ಚೀಟಿಗಳನ್ನು ಒದಗಿಸಬೇಕು ಎಂದು ಆಗ್ರಹಿಸಲಾಯಿತು.
Kshetra Samachara
28/02/2022 04:04 pm