ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ರಾಷ್ಟ್ರೀಯ ಹೆದ್ದಾರಿ ಶಂಕುಸ್ಥಾಪನೆ ಕಾರ್ಯಕ್ರಮ ಉದ್ಘಾಟಿಸಿದ ನಿತಿನ್ ಗಡ್ಕರಿ

ಹುಬ್ಬಳ್ಳಿ: ಕೇಂದ್ರ ಸರ್ಕಾರದ ಮಹತ್ವಪೂರ್ಣ ಯೋಜನೆಯಲ್ಲಿ ಒಂದಾಗಿರುವ ರಾಷ್ಟ್ರೀಯ ಹೆದ್ದಾರಿಗಳ ಲೋಕಾರ್ಪಣೆ ಕಾರ್ಯಕ್ರಮವನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಉದ್ಘಾಟಿಸಿದರು.

ಗಬ್ಬೂರಿನ ಟ್ರಕ್ ಟರ್ಮಿನಲ್ ಜಂಕ್ಷನ್‌ ಬಳಿ ಕೇಂದ್ರ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ 12,795 ಕೋಟಿ ರೂಪಾಯಿ ವೆಚ್ಚದ 925 ಕಿ.ಮೀ. ಉದ್ದದ 26 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಲೋಕಾರ್ಪಣೆಗೊಳಿಸುವ ಕಾರ್ಯಕ್ರಮ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು.

ಇನ್ನೂ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ವ್ಯವಹಾರಗಳ ಹಾಗೂ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ್ ಜೋಶಿ, ಸಚಿವ ಶ್ರೀರಾಮಲು ಉಪಸ್ಥಿತರಿದ್ದರು.

Edited By : Shivu K
Kshetra Samachara

Kshetra Samachara

28/02/2022 04:11 pm

Cinque Terre

17.24 K

Cinque Terre

0

ಸಂಬಂಧಿತ ಸುದ್ದಿ