ಹುಬ್ಬಳ್ಳಿ: ಕೇಂದ್ರ ಸರ್ಕಾರ ಈಗ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ನರೇಂದ್ರ ಮೋದಿ ಅವರಂತಹ ಪ್ರಧಾನಿ ಪಡೆದ ನಾವೆಲ್ಲರೂ ಧನ್ಯರು ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಹೇಳಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಶಂಕುಸ್ಥಾಪನೆ ಕಾರ್ಯಕ್ರಮದ ವೇಳೆಯಲ್ಲಿ ಮಾತನಾಡಿದ ಅವರು, ದೇಶದ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಗಳನ್ನು ಮಾತ್ರವಲ್ಲದೆ ಜಿಲ್ಲಾವಾರು ರಸ್ತೆಗಳನ್ನು ಅಭಿವೃದ್ಧಿ ಮಾಡಲು ಹಲವಾರು ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಜಾರಿಗೊಳಿಸಲಾಗಿದೆ ಎಂದರು.
ಅಟಲ್ ಬಿಹಾರಿ ವಾಜಪೇಯಿ ಅವರ ನಂತರದಲ್ಲಿ ಮೊದಲ ಬಾರಿಗೆ ಪ್ರಧಾನ ಮಂತ್ರಿಯಾಗಿ ಇಂತಹ ದೊಡ್ಡಮಟ್ಟದ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೊಳಿಸಿದ್ದಾರೆ ಎಂದು ಹೇಳಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
28/02/2022 04:26 pm