ಹುಬ್ಬಳ್ಳಿ: ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪೂರಕವಾದ ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ಶಂಕುಸ್ಥಾಪನೆ ನೆರವೇರಿಸಿದ ಕೇಂದ್ರ ರಸ್ತೆ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಈ ಹೆದ್ದಾರಿ ಯೋಜನೆಯನ್ನು ರಾಷ್ಟಕ್ಕೆ ಸಮರ್ಪಣೆ ಮಾಡಿದರು.
ಹೌದು. 12,795 ಕೋಟಿ ರೂ. ವೆಚ್ಚದ 925 ಕಿ.ಮೀ. ಉದ್ದದ 26 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಶಂಕುಸ್ಥಾಪನೆಯ ನಂತರ ಹೆದ್ದಾರಿಗಳ ಯೋಜನೆಯನ್ನು ರಾಷ್ಟ್ರಕ್ಕೆ ಅರ್ಪಣೆ ಮಾಡಿದರು. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ವ್ಯವಹಾರಗಳ ಹಾಗೂ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಚಿವ ಶ್ರೀರಾಮುಲು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
28/02/2022 06:20 pm