ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ-ಧಾರವಾಡ ಅಭಿವೃದ್ಧಿಗೆ ಒತ್ತು: ಸಚಿವ ಹಾಲಪ್ಪ ಆಚಾರ್

ಹುಬ್ಬಳ್ಳಿ: ರಾಜ್ಯದಲ್ಲಿ ಅತಿಹೆಚ್ಚು ವಿದ್ಯಾರ್ಥಿ ನಿಲಯಗಳನ್ನು ಹೊಂದಿರುವ ಜಿಲ್ಲೆಗಳಲ್ಲಿ ಧಾರವಾಡವೂ ಒಂದಾಗಿದೆ. ಇಲ್ಲಿನ ಎಲ್ಲಾ ಹಾಸ್ಟೆಲ್‌ಗಳಿಗೆ ಕಟ್ಟಡ ಹಾಗೂ ಇತರ ಮೂಲ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ಅವಳಿ ನಗರದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಹೇಳಿದ್ದಾರೆ.

ರಾಜೀವ್ ನಗರದ ರೇಲ್ ಗಾರ್ಡನ್ ಹತ್ತಿರ ಸಮಾಜ ಕಲ್ಯಾಣ ಇಲಾಖೆಯು 3.75 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿರುವ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲಿನ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.

ಈ ವೇಳೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಈರಣ್ಣ ಜಡಿ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಶ ಕಲಬುರ್ಗಿ, ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ, ಜಿಪಂ ಸಿಇಓ ಡಾ.ಸುರೇಶ ಇಟ್ನಾಳ, ಸಮಾಜ ಕಲ್ಯಾಣ ಜಂಟಿ ನಿರ್ದೇಶಕ ಡಾ.ಎನ್.ಆರ್.ಪುರುಷೋತ್ತಮ ಇದ್ದರು.

Edited By : Vijay Kumar
Kshetra Samachara

Kshetra Samachara

05/03/2022 02:47 pm

Cinque Terre

10.06 K

Cinque Terre

1

ಸಂಬಂಧಿತ ಸುದ್ದಿ