ಹುಬ್ಬಳ್ಳಿ: ಪೌರ ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಪೌರಕಾರ್ಮಿಕರ ಮತ್ತು ನೌಕರರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಪ್ರತಿಭಟನೆ ನಡೆಸಿದ ಪೌರಕಾರ್ಮಿಕರು, ಸರ್ಕಾರದ ಆದೇಶದಂತೆ 14 ಅಂಶಗಳ ಪ್ರವಾದಾನಗಳನ್ನು ಒದಗಿಸುವಂತೆ ಹಾಗೂ ಮಹಾನಗರ ಪಾಲಿಕೆ 8 ತಿಂಗಳಿಂದ ಪೌರಕಾರ್ಮಿಕರಿಗೆ ಬೆಳಗಿನ ಉಪಾಹಾರ ಪೂರೈಕೆ ಸ್ಥಗಿತಗೊಳಿಸಿದೆ ಕೂಡಲೇ ಉತ್ತಮ ಗುಣಮಟ್ಟದ ಬೆಳಗಿನ ಉಪಾಹಾರ ವನ್ನು ಪೌರಕಾರ್ಮಿಕರಿಗೆ ಪೂರೈಸುವಂತೆ ಹಾಗೂ ಪಾಲಿಕೆ ಆವರಣದಲ್ಲಿ ಪೌರ ಕಾರ್ಮಿಕರ ಸಂಘದ ಕಚೇರಿ ಕಟ್ಟಡ ಒದಗಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ಮಾಡಿದರು.
Kshetra Samachara
09/03/2022 03:15 pm