ಧಾರವಾಡ: ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು, ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಪಕ್ಷ ಖಂಡಿತವಾಗಿಯೂ ಅಧಿಕಾರಕ್ಕೆ ಬರಲಿದೆ ಎಂದು ಐಟಿಬಿಟಿ ಸಚಿವ ಡಾ.ಅಶ್ವತ್ಥ ನಾರಾಯಣ ವಿಶ್ವಾಸ ವ್ಯಕ್ತಪಡಿಸಿದರು.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಪ್ರದೇಶ ಹೊರತುಪಡಿಸಿದರೆ,ಉಳಿದ ರಾಜ್ಯಗಳಲ್ಲಿ ಬಿಜೆಪಿ ತೀವ್ರ ಪೈಪೋಟಿ ನೀಡುತ್ತಿದ್ದು, ಕೊನೆಗೆ ನಾಲ್ಕು ರಾಜ್ಯಗಳಲ್ಲಿ ನಮ್ಮ ಪಕ್ಷವೇ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಆಮ್ ಆದ್ಮಿ ಪಕ್ಷ ದೆಹಲಿ ಸಿಟಿಯಲ್ಲಿ ಅಧಿಕಾರಕ್ಕೆ ಬಂದಿದೆ. ಬದಲಾದ ಸನ್ನಿವೇಶದಲ್ಲಿ ಪಂಜಾಬ್‌ನಲ್ಲಿ ಅದು ಮುನ್ನಡೆ ಸಾಧಿಸಿರಬಹುದು. ಇಂತಹ ಪಕ್ಷಗಳಿಗೆ ರಾಜಕೀಯ ನೆಲೆ ಇಲ್ಲ. ಇಂತಹ ಪಕ್ಷಗಳು ಬರುತ್ತವೆ ಹೋಗುತ್ತವೆ. ಪಂಜಾಬ್ ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷ ಆರಂಭದ ಸ್ವರೂಪ ಪಡೆದುಕೊಂಡಿದೆ. ಆದರೆ, ಅದೇ ಅವರಿಗೆ ಕೊನೆಯಾಗುತ್ತದೆ. ಇದಕ್ಕೆಲ್ಲ ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದರು.
Kshetra Samachara
10/03/2022 11:44 am