ಕುಂದಗೋಳ: ಪರಿಶಿಷ್ಟ ಪಂಗಡಕ್ಕೆ ಶೇ 7.5% ಮೀಸಲಾತಿ ಹೆಚ್ಚಳ ಮಾಡುವಂತೆ ಮಹರ್ಷಿ ವಾಲ್ಮೀಕಿ ನಾಯಕ ಮಹಾಸಭಾ ಕಾರ್ಯಕರ್ತರು ಕುಂದಗೋಳ ಘಟಕ ತಹಶೀಲ್ದಾರ್ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು..
ಬಿಜೆಪಿ ಸರ್ಕಾರ ಪರಿಶಿಷ್ಟ ಸಮುದಾಯಕ್ಕೆ ಶೇ.7.5% ಮೀಸಲಾತಿ ವಿಚಾರವನ್ನು ತಮ್ಮ ಚೌಕಟ್ಟಿನೊಳಗೆ ಇಟ್ಟುಕೊಂಡು ಮೀಸಲಾತಿ ಹೆಚ್ಚಳ ವಿಚಾರವಾಗಿ ಮೌನ ವಹಿಸಿದೆ.
ಈ ಬಗ್ಗೆ ಸರ್ಕಾರ ಆಲೋಚಿಸಿ ಮೀಸಲಾತಿ ನೀಡದೆ ಇದ್ದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಾಗುವುದು ಎಂದರು.
Kshetra Samachara
10/03/2022 03:24 pm