ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ನಾಲ್ಕು ರಾಜ್ಯಗಳಲ್ಲಿ ಕಮಲ ಕಿಲಕಿಲ: ಧಾರವಾಡದಲ್ಲಿ ವಿಜಯೋತ್ಸವ

ಧಾರವಾಡ: ಪಂಚರಾಜ್ಯಗಳ ಚುನಾವಣೆ ಪೈಕಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಅಭೂತಪೂರ್ವ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ ಹಾಗೂ ಮಣಿಪುರ ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದರಿಂದ ಧಾರವಾಡದ ಸುಭಾಷ್ ರಸ್ತೆಯಲ್ಲಿರುವ ಬಿಜೆಪಿ ಕಚೇರಿ ಎದುರು ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಿಸಿದರು. ಅಲ್ಲದೇ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದ ಕಾರ್ಯಕರ್ತರು, ಈ ಚುನಾವಣಾ ಫಲಿತಾಂಶ ಮುಂದಿನ ಕರ್ನಾಟಕ ವಿಧಾನಸಭೆ ಚುನಾವಣೆಯ ದಿಕ್ಸೂಚಿ ಎಂದು ಹರ್ಷ ವ್ಯಕ್ತಪಡಿಸಿದರು.

Edited By :
Kshetra Samachara

Kshetra Samachara

10/03/2022 05:03 pm

Cinque Terre

27.2 K

Cinque Terre

1

ಸಂಬಂಧಿತ ಸುದ್ದಿ