ಧಾರವಾಡ: ಸಾಂವಿಧಾನಿಕ ಹುದ್ದೆ ಅಲಂಕರಿಸಿರುವ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಮೇಲೆ ಅಟ್ರಾಸಿಟಿ ಕೇಸ್ ದಾಖಲಿಸಿದ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಅಮಾನತ್ತು ಮಾಡದೇ ಇದ್ದರೆ ಸೋಮವಾರದಿಂದ ವಿಧಾನ ಪರಿಷತ್‌ನಲ್ಲಿ ಮತ್ತೆ ಧ್ವನಿ ಎತ್ತುವುದಾಗಿ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಹೇಳಿದರು.
ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಭಾಪತಿ ಸ್ಥಾನ ಅದೊಂದು ಸಾಂವಿಧಾನಿಕ ಹುದ್ದೆ. ಅವರ ಮೇಲೆ ಎಫ್‌ಐಆರ್ ದಾಖಲಿಸಬೇಕು ಎಂದರೆ ರಾಜ್ಯಪಾಲರ ಅನುಮತಿ ಬೇಕು. ಆದರೆ, ಇದ್ಯಾವುದನ್ನೂ ಲೆಕ್ಕಿಸದೇ ಸಭಾಪತಿಗಳ ಮೇಲೆ ಧಾರವಾಡ ಎಸ್‌ಪಿ ಅವರು ಅಟ್ರಾಸಿಟಿ ಕೇಸ್ ದಾಖಲಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸಪೆಕ್ಟರ್ ಅವರನ್ನು ಅಮಾನತ್ತು ಮಾಡಲಾಗಿದೆ. ಆದರೆ, ನಾವು ಹೇಳಿದ್ದು, ಎಸ್‌ಪಿ ಅವರನ್ನು ಅಮಾನತ್ತು ಮಾಡಬೇಕು ಎಂದು. ಎಸ್‌ಪಿ ಅವರ ಮೇಲೆ ಕ್ರಮ ಕೈಗೊಳ್ಳದಿದ್ದರೆ ಸೋಮವಾರ ಮತ್ತೆ ಸದನದಲ್ಲಿ ಧ್ವನಿ ಎತ್ತಲಾಗುವುದು ಎಂದರು.
Kshetra Samachara
12/03/2022 12:44 pm