ಹುಬ್ಬಳ್ಳಿ: ದೇಶದಲ್ಲಿ ಇಬ್ಬರು ಸಿದ್ದು ಇದ್ದಾರೆ. ಒಬ್ಬ ಸಿದ್ದು ಪಂಜಾಬಿನಲ್ಲಿ ಕಾಂಗ್ರೆಸ್ ಹಾಳು ಮಾಡಿದ, ನಮ್ಮ ರಾಜ್ಯದಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ ಹಾಳು ಮಾಡುತ್ತಾರೆ. ಸಿದ್ಧರಾಮಯ್ಯ ಮತ್ತು ಡಿಕೆಶಿ ಬಣ ಬೇರೇ ಬೇರೆ ಇದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಈಗಾಗಲೇ ಕಾಂಗ್ರೆಸ್ ನಾಯಕರಲ್ಲಿ ಗುಂಪುಗಾರಿಕೆ ಆರಂಭವಾಗಿದೆ. ದೇಶದಲ್ಲಿ ಕಾಂಗ್ರೆಸ್ ಮುಕ್ತವಾಗುತ್ತೆ ಅಂತಾ ಮೋದಿಯವರು ಹೇಳುತ್ತಿದ್ದರು. ಈಗ ಅದೇ ಮಾತಿನಂತೆ ದೇಶದಲ್ಲಿ ಕಾಂಗ್ರೆಸ್ ಮುಕ್ತವಾಗುತ್ತಿದೆ ಎಂದರು.
ಬಜೆಟ್ ಬಗ್ಗೆ ಮಾತಾನಾಡಿದ ಅವರು, ರಾಜ್ಯದಲ್ಲಿ ಹಿಂದಿನ ಎಲ್ಲಾ ಸರ್ಕಾರಗಳು ಬಜೆಟ್ ಹಣವನ್ನ ಬಾಕಿ ಉಳಿಸಿಕೊಂಡಿವೆ. ಸಿದ್ದರಾಮಯ್ಯ ಅವರ ಇಂದಿರಾ ಕ್ಯಾಂಟೀನ್ ಹಣ ಸಾಕಷ್ಟು ಬಾಕಿ ಉಳಿದಿದೆ. ಅದರ ಬಗ್ಗೆ ಕಾಂಗ್ರೆಸ್ ನಾಯಕರು ಮಾತನಾಡಲಿ ಎಂದು ಆಕ್ರೋಶ ಗೊಂಡರು.
ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ವಿಚಾರ ,ಈಗ ಬಜೆಟ್ ಅಧಿವೇಶನ ನಡೆಯುತ್ತಿದೆ ಈ ಬಗ್ಗೆ ವರಿಷ್ಠರು ಹಾಗೂ ಸಿಎಂ ನಿರ್ಧಾರ ಕೈಗೊಳ್ತಾರೆ. ಇದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟದ್ದು. ನಾನು ಸಚಿವ ಸಂಪುಟ ಸೇರುವ ವಿಚಾರದ ಬಗ್ಗೆ ಪದೇ ಪದೇ ಹೇಳಲ್ಲ. ನನ್ನ ನಿಲುವು ಸ್ಪಷ್ಟವಿದೆ. ನಾನು ಸಂಪುಟ ಸೇರಲ್ಲ. ನನ್ನ ರಾಜಕೀಯ ಅನುಭವದ ಪ್ರಕಾರ ರಾಜ್ಯದಲ್ಲಿ ಅವಧಿಗೆ ಮುನ್ನ ಚುನಾವಣೆ ನಡೆಯಲ್ಲ ಎಂದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
12/03/2022 02:53 pm