ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಬಿಜೆಪಿ, ಜೆಡಿಎಸ್ ಮಧ್ಯೆ ಮ್ಯಾಚ್ ಫಿಕ್ಸಿಂಗ್ ಆಗಿದೆ; ಸಲೀಂ ಅಹ್ಮದ್ ಆರೋಪ

ಧಾರವಾಡ: ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮಧ್ಯೆ ಮ್ಯಾಚ್ ಫಿಕ್ಸಿಂಗ್ ಆಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಆರೋಪಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ಸದನದಲ್ಲಿ ಧ್ವನಿ ಎತ್ತುತ್ತವೆ. ಆದರೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ವಿರೋಧ ಪಕ್ಷ ಕಾಂಗ್ರೆಸ್ ವಿರುದ್ಧ ಸದನದಲ್ಲಿ ಮಾತನಾಡಿದ್ದಾರೆ. ಸಮ್ಮಿಶ್ರ ಸರ್ಕಾರದ ವಿರುದ್ಧ ಮಾತನಾಡಿದ್ದಾರೆ. ಇದನ್ನೆಲ್ಲ ನೋಡಿದರೆ ಎಲ್ಲೋ ಒಂದು ಕಡೆ ಬಿಜೆಪಿ ಮತ್ತು ಜೆಡಿಎಸ್ ಮಧ್ಯೆ ಮ್ಯಾಚ್ ಫಿಕ್ಸಿಂಗ್ ಆದಂತೆ ಕಂಡು ಬರುತ್ತಿದೆ ಎಂದರು.

ಸಿ.ಎಂ.ಇಬ್ರಾಹಿಂ ಅವರು ಕಾಂಗ್ರೆಸ್ ಪಕ್ಷ ಬಿಟ್ಟು ಹೋಗುವುದಿಲ್ಲ ಎಂಬ ವಿಶ್ವಾಸ ಇದೆ. ಹಾಲಿ ಎಂಎಲ್‌ಎ ಬಿಟ್ಟು ಇಬ್ರಾಹಿಂ ಅವರಿಗೆ ಟಿಕೆಟ್ ಕೊಡಲಾಗಿತ್ತು. ಫಲಿತಾಂಶ ಏನಾಯಿತು ಎಂಬುದು ಎಲ್ಲರಿಗೂ ಗೊತ್ತಿದೆ. ಆದರೂ ಎರಡು ಬಾರಿ ಇಬ್ರಾಹಿಂ ಅವರನ್ನು ಎಂಎಲ್‌ಸಿ ಮಾಡಲಾಗಿದೆ. ಆದರೆ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಸ್ಥಾನ ಕೊಡದಿದ್ದಕ್ಕೆ ಇಬ್ರಾಹಿಂ ಅವರು ಮುನಿಸಿಕೊಂಡಿದ್ದಾರೆ. ನಮಗೆ ವಿಶ್ವಾಸ ಇದೆ ಅವರು ಕಾಂಗ್ರೆಸ್ ಬಿಟ್ಟು ಜೆಡಿಎಸ್‌ಗೆ ಹೋಗುವುದಿಲ್ಲ ಎಂದರು.

ಪಂಜಾಬ್‌ನಲ್ಲಿ ನಮ್ಮ ತಪ್ಪಿನಿಂದ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದೆ. ನಾಲ್ಕು ರಾಜ್ಯಗಳಲ್ಲಿ ನಮ್ಮ ಪಕ್ಷ ಅಧಿಕಾರದಲ್ಲಿರಲಿಲ್ಲ. ಉತ್ತರ ಪ್ರದೇಶದಲ್ಲಿ ಸಾಕಷ್ಟು ಕೆಲಸ ಮಾಡಿದ್ದೇವೆ ಎನ್ನುವ ಮೋದಿ ಹಾಗೂ ಯೋಗಿ ಅವರ ಪಕ್ಷಕ್ಕೆ ಕಳೆದ ಬಾರಿಗಿಂತ ಈ ಬಾರಿ 57 ಸೀಟುಗಳು ಕಡಿಮೆ ಬಂದಿವೆ. ಅವರು ಜನಪರ ಕೆಲಸಗಳನ್ನೇ ಮಾಡಿದ್ದರೆ ಇನ್ನೂ ಹೆಚ್ಚಿನ ಸ್ಥಾನ ಅವರು ಗೆಲ್ಲಬೇಕಿತ್ತು ಎಂದರು.

ಕರ್ನಾಟಕ ರಾಜ್ಯದ ಚಿತ್ರಣವೇ ಬೇರೆ ಇದೆ. ಇಲ್ಲಿನ ಜನತೆ ಕಾಂಗ್ರೆಸ್ ಪಕ್ಷದತ್ತ ಹೆಚ್ಚಿನ ಒಲವು ತೋರಿಸಿದ್ದಾರೆ. ಹಾನಗಲ್‌ನಲ್ಲಿ ಇಡೀ ಸರ್ಕಾರವೇ ಬಂದು ಬಿಜೆಪಿ ಪರ ಪ್ರಚಾರ ಮಾಡಿದರೂ ಅಲ್ಲಿ ಕಾಂಗ್ರೆಸ್‌ಗೆ ಜನಾಶೀರ್ವಾದ ಸಿಕ್ಕಿದೆ. ಬಿಜೆಪಿಗೆ ಇನ್ನೂ ಒಂದು ವರ್ಷ ಅವಕಾಶ ಇದೆ. ಜನಪರ ಕೆಲಸಗಳನ್ನು ಮಾಡಲಿ. ಬರುವ ದಿನಗಳಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆ ಏರುವುದು ಶತಸಿದ್ಧ ಎಂದರು.

ರಾಜ್ಯ ಸರ್ಕಾರ ಶೇ.40 ರಷ್ಟು ಕಮೀಷನ್ ಕೇಳುತ್ತಿದೆ ಎಂದು ಗುತ್ತಿಗೆದಾರ ಪ್ರಧಾನಮಂತ್ರಿ ಕಚೇರಿಗೆ ಪತ್ರ ಬರೆಯುತ್ತಾರೆ ಎಂದರೆ ಈ ಸರ್ಕಾರ ಎಷ್ಟು ನಿರ್ಜೀವ ಸರ್ಕಾರ ಎಂಬುದು ಗೊತ್ತಾಗುತ್ತದೆ. ಮೇಕೆದಾಟು ಬಗ್ಗೆ ದೊಡ್ಡಮಟ್ಟದಲ್ಲಿ ಹೋರಾಟ ಮಾಡಿದ್ದಕ್ಕೆ ಒಂದು ಸಾವಿರ ಕೋಟಿಯನ್ನು ಸರ್ಕಾರ ಮೀಸಲಿಟ್ಟಿದೆ. ಮುಂದಿನ ದಿನಗಳಲ್ಲಿ ಮಹದಾಯಿ ಸೇರಿದಂತೆ ಇತ್ಯಾದಿ ವಿಷಯಗಳ ಕುರಿತು ನಾವು ಹೋರಾಟ ಮಾಡಲಿದ್ದೇವೆ ಎಂದರು.

Edited By : Manjunath H D
Kshetra Samachara

Kshetra Samachara

12/03/2022 08:57 pm

Cinque Terre

65.72 K

Cinque Terre

6

ಸಂಬಂಧಿತ ಸುದ್ದಿ