ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಜೆ.ಪಿ. ನಡ್ಡಾ ಭೇಟಿ ವೈಯಕ್ತಿಕ ಕಾರಣಕ್ಕಾಗಿ, ಸ್ಥಾನಮಾನಕ್ಕಾಗಿ ಅಲ್ಲ; ವಿಜಯೇಂದ್ರ

ಹುಬ್ಬಳ್ಳಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಆಗಿದ್ದು ವೈಯಕ್ತಿಕ ಕಾರಣಕ್ಕಾಗಿ. ಕೆಲ ಸಂಘಟನೆ ಕುರಿತು ಚರ್ಚೆ ಮಾಡಿದ್ದೇವೆಯೇ ಹೊರತು ಯಾವುದೇ ಸ್ಥಾನಮಾನಕ್ಕಾಗಿ ಅಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ- ಪುನಾರಚನೆ ವೇಳೆ ನಾನು ಸಚಿವಾಕಾಂಕ್ಷಿ ಎಂಬ ಪ್ರಶ್ನೆ ಉದ್ಭವಿಸುವುದಿಲ್ಲ. ಯಡಿಯೂರಪ್ಪ ತಮ್ಮ ಪುತ್ರನಿಗೆ ಸಚಿವ ಸ್ಥಾನ ಕೊಡಿಸಲು ಒತ್ತಡ ಹೇರುತ್ತಿದ್ದಾರೆ ಎಂಬುದು ಸತ್ಯಕ್ಕೆ ದೂರ.

ಪಂಚ ರಾಜ್ಯಗಳ ಚುನಾವಣೆಯಲ್ಲಿ ನಾಲ್ವರಲ್ಲಿ ಬಿಜೆಪಿಯೇ ಜಯ ಸಾಧಿಸಿದೆ. ಕರ್ನಾಟಕದ ಮುಂದಿನ ಚುನಾವಣೆಯಲ್ಲಿಯೂ ಗೆಲ್ಲಲಿದ್ದೇವೆ.

ಕಾಂಗ್ರೆಸ್ ಗೆ ಯುವಕರು ಹೋಗುತ್ತಿಲ್ಲ. ಅವರ ಸದಸ್ಯತ್ವ ನೋಂದಣಿಗೆ ಹಿನ್ನಡೆ ಆಗುತ್ತಿರುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರೇ ಯುವ ಸಮಾವೇಶದಲ್ಲಿ ಒಪ್ಪಿಕೊಂಡಿದ್ದಾರೆ. ಯುವ ಸಮೂಹ ಮೋದಿ ಅವರ ಕಾರ್ಯವೈಖರಿ ನೋಡಿ ಬಿಜೆಪಿಗೆ ಹರಿದುಬರುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಧೂಳೀಪಟ ಆಗುವುದರಲ್ಲಿ ಎರಡು ಮಾತಿಲ್ಲ ಎಂದರು.

Edited By : Nagesh Gaonkar
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

13/03/2022 08:07 pm

Cinque Terre

63.01 K

Cinque Terre

0

ಸಂಬಂಧಿತ ಸುದ್ದಿ