ಹುಬ್ಬಳ್ಳಿ: ಹಿಜಾಬ್ ಕುರಿತಾಗಿ ಇಂದು ಹೈಕೋರ್ಟ್ ನೀಡಿರುವ ತೀರ್ಪು ಮುಸ್ಲಿಂ ವಿರೋಧಿಯಾಗಿದೆ. ಈ ತೀರ್ಪನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ. ಇದು ಯಾವುದೇ ಹಿಂದೂ-ಮುಸ್ಲಿಂ ವಿರೋಧದ ನಡೆಯಲ್ಲ ಎಂದು ಮುಸ್ಲಿಂ ಮುಖಂಡ ಅಲ್ತಾಫ್ ಹಳ್ಳೂರ ಹೇಳಿದರು.
ಹಿಜಾಬ್ ಪ್ರಕರಣ ತೀರ್ಪು ಪ್ರಕಟವಾದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಈ ತೀರ್ಪು ಇಸ್ಲಾಂ ಧರ್ಮದ ಧಾರ್ಮಿಕ ಆಚರಣೆಯ ವಿರುದ್ಧವಾಗಿದೆ. ಈ ಬಗ್ಗೆ ಮತ್ತೆ ಹೋರಾಟ ಮಾಡುವ ಮೂಲಕ ಸುಪ್ರೀಂ ಕೋರ್ಟ್ ಮೆಟ್ಟಿಲೇರುತ್ತೇವೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ತೀರ್ಪು ವಿರೋಧಿಸುತ್ತೇವೆ. ಪರೀಕ್ಷೆ ಇರುವುದರಿಂದ ರಾಜ್ಯ ಸರ್ಕಾರ ಮಧ್ಯಪ್ರವೇಶಿಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದರು.
ಪ್ರಧಾನಿ ನರೇಂದ್ರ ಮೋದಿಯವರು ಬೇಟಿ ಬಚಾವೋ, ಬೇಟಿ ಪಡಾವೋ ಎಂದು ಬಾಷಣ ಮಾಡುತ್ತಾರೆ. ಆದರೆ, ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಶಿಕ್ಷಣದ ಬಗ್ಗೆ ಗಮನ ಹರಿಸಬೇಕು. ಈ ತೀರ್ಪನ್ನು ನಾವು ಸ್ವೀಕರಿಸಲು ಸಾಧ್ಯವಿಲ್ಲ. ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಅವರು ಹೇಳಿದರು.
Kshetra Samachara
15/03/2022 01:50 pm