ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಬಿಜೆಪಿ ಹೆಸರಿಗೆ ಮಾತ್ರ ಡಬಲ್ ಇಂಜಿನ್; ಮಾಜಿ ಸಿಎಂ ಮೊಯ್ಲಿ

ಹುಬ್ಬಳ್ಳಿ: ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಡಬಲ್ ಇಂಜಿನ್ ಸರ್ಕಾರ ಇದ್ದರೂ ಕೂಡ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಸಾಧ್ಯವಾಗುತ್ತಿಲ್ಲ. ಮಹದಾಯಿ, ಮೇಕೆದಾಟು ಬಗ್ಗೆ ಆಡಳಿತಾರೂಢ ಬಿಜೆಪಿ ಯಾವುದೇ ಕಾಳಜಿ ಇಲ್ಲವಾಗಿದೆ. ಸ್ಥಳೀಯ ಚುನಾವಣೆಗಳ ಬಗ್ಗೆ ಅಸಂವಿಧಾನಿಕ ನಿಲುವನ್ನು ಬಿಜೆಪಿ ಸರ್ಕಾರ ಹೊಂದಿದೆ ಎಂದು ಮಾಜಿ ಸಿಎಂ ಹಾಗೂ ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.

ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಡಬಲ್ ಇಂಜಿನ್ ಸರ್ಕಾರ ಎಂದು ಹೇಳುತ್ತದೆ ವಿನಃ ಯಾವುದೇ ಕೆಲಸವನ್ನು ಮಾಡುತ್ತಿಲ್ಲ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಸಾಧ್ಯವಾಗುತ್ತಿಲ್ಲ. ನಾನು ಕೇಂದ್ರ ಸಚಿವನಾಗಿದ್ದ ಸಂದರ್ಭದಲ್ಲಿ ನೀರಿನ ಸಮಸ್ಯೆ ಒಂದೇ ವಾರದಲ್ಲಿ ಬಗೆಹರಿಸುವ ಕಾರ್ಯವನ್ನು ಮಾಡಿದ್ದೇವೆ. ಆದರೆ ಬಿಜೆಪಿ ನೇತೃತ್ವದ ಸರ್ಕಾರ ಕೇವಲ ಬಣ್ಣದ ಮಾತುಗಳಿಂದ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ ಎಂದರು.

ಈಗಾಗಲೇ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ನಡೆದ ಆರೇಳು ತಿಂಗಳು ಕಳೆದಿದೆ. ಆದರೂ ಮೇಯರ್ ಉಪಮೇಯರ್ ಚುನಾವಣೆ ನಡೆದಿಲ್ಲ. ಅಲ್ಲದೇ ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ ಚುನಾವಣೆ ಬಗ್ಗೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ. ಬಿಜೆಪಿ ಅಸಂವಿಧಾನಿಕ ನಿಲುವನ್ನು ಹೊಂದಿರುವುದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

Edited By : Manjunath H D
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

16/03/2022 07:20 pm

Cinque Terre

43.27 K

Cinque Terre

3

ಸಂಬಂಧಿತ ಸುದ್ದಿ