ಧಾರವಾಡ: ಧಾರವಾಡ ಮಹಾನಗರ ಪಾಲಿಕೆ ಕಚೇರಿ ಮುಂಭಾಗದಲ್ಲಿ ಕರ್ನಾಟಕ ಥಿಂಕರ್ಸ್ ಫೋರಮ್ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಇದಕ್ಕೆ ಮುಖ್ಯ ಕಾರಣ ರಸ್ತೆ ಅಗಲೀಕರಣ.
ಹೌದು! ಧಾರವಾಡ ಜಿಲ್ಲಾ ಆಸ್ಪತ್ರೆ ಬಡವರ ಪಾಲಿನ ಸಂಜೀವಿನಿಯಾಗಿ ಕೆಲಸ ಮಾಡುತ್ತಿದೆ. ಆದರೆ, ಈ ಆಸ್ಪತ್ರೆಗೆ ಹೋಗಲು ಸುಸಜ್ಜಿತವಾದ ರಸ್ತೆ ಇಲ್ಲ. ಇದ್ದ ರಸ್ತೆ ಹದಗೆಟ್ಟು ಹೋಗಿದೆ. ಹೀಗಾಗಿ ಈ ರಸ್ತೆಯನ್ನು ಅಗಲೀಕರಣ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಕರ್ನಾಟಕ ಥಿಂಕರ್ಸ್ ಫೋರಮ್ ಅಧ್ಯಕ್ಷ ಪಿ.ಎಚ್.ನೀರಲಕೇರಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾ ಆಸ್ಪತ್ರೆಯಿಂದ ಪಾದಯಾತ್ರೆ ಮೂಲಕ ಬಂದ ಪ್ರತಿಭಟನಾಕಾರರು, ಮಹಾನಗರ ಪಾಲಿಕೆ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಕೂಡಲೇ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಜಿಲ್ಲಾ ಆಸ್ಪತ್ರೆ ರಸ್ತೆಯನ್ನು ಅಗಲೀಕರಣ ಮಾಡಿ, ಸುಸಜ್ಜಿತ ವಿದ್ಯುತ್ ದೀಪಗಳನ್ನು ಅಳವಡಿಸಬೇಕು. ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
Kshetra Samachara
22/03/2022 12:56 pm