ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಜಾಬ್ ವಿಷಯವಾಗಿ ಮತ್ತೆ ಮಾತನಾಡಿ ಗೊಂದಲವನ್ನುಂಟು ಮಾಡಿದ್ದಾರೆ. ಮಾತಿನ ಭರಾಟೆಯಲ್ಲಿ ಸಿದ್ದರಾಮಯ್ಯನವರು, ಹಿಂದೂ ಹೆಣ್ಣು ಮಕ್ಕಳು ತಲೆ ಮೇಲೆ ದುಪ್ಪಟ್ಟಾ ಹಾಕೇ ಇಲ್ವಾ? ಹಿಂದೂ ಸ್ವಾಮೀಜಿಗಳು ತಲೆ ಮೇಲೆ ಪೇಟಾ ಹಾಕೇ ಇಲ್ವಾ? ಎಂಬ ಪ್ರಶ್ನೆ ಕೇಳಿ ಮತ್ತೆ ವಿವಾದ ಸೃಷ್ಟಿಸಿದ್ದಾರೆ. ಇವ್ರ ಹೇಳಿಕೆಗೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಧಾರವಾಡದಲ್ಲಿ ಪಬ್ಲಿಕ್ ನೆಕ್ಸ್ಟ್ ಜೊತೆ ಮಾತನಾಡಿರುವ ಮುತಾಲಿಕ್, ಸಿದ್ದರಾಮಯ್ಯನವರು ನೂರು ಕೋಟಿ ಹಿಂದೂಗಳಿಗೆ ಅಪಮಾನ ಮಾಡುವ ಕೆಲಸ ಮಾಡಿದ್ದಾರೆ. ಸಿದ್ದರಾಮಯ್ಯನವರ ಮೇಲೆ ನಮಗೆ ಗೌರವ ಇದೆ. ಆದರೆ, ಮುಸ್ಲಿಂ ಮತಗಳನ್ನು ಪಡೆದುಕೊಳ್ಳುವುದಕ್ಕೋಸ್ಕರ ಹಿಜಾಬ್ ಮತ್ತು ಮಠಾಧಿಪತಿಗಳ ಪೇಟಾಕ್ಕೆ ಹೋಲಿಕೆ ಮಾಡುವ ಕೆಲಸ ಮಾಡಿದ್ದಾರೆ. ಸಿದ್ದರಾಮಯ್ಯನವರು ಮುಸ್ಲಿಂ ಮತಗಳನ್ನು ಪಡೆದುಕೊಳ್ಳಲಿ ಬೇಡ ಎನ್ನುವುದಿಲ್ಲ. ಆದರೆ, ಸಾವಿರಾರು ವರ್ಷಗಳ ಇತಿಹಾಸ ಇರುವ ಮಠಾಧಿಪತಿಗಳ ಪೇಟಾಕ್ಕೆ ಅಪಮಾನ ಮಾಡುವ ಮೂಲಕ ಸಿದ್ದರಾಮಯ್ಯವರು ಅಕ್ಷಮ್ಯ ಅಪರಾಧ ಮಾಡಿದ್ದಾರೆ. ಈ ವಿಷಯವಾಗಿ ಸಿದ್ದರಾಮಯ್ಯನವರು ಕೂಡಲೇ ಕ್ಷಮೆ ಕೇಳಬೇಕು. ಕ್ಷಮೆ ಕೇಳುವವರೆಗೂ ನಾವು ಬಿಡುವುದಿಲ್ಲ ಎಂದಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
25/03/2022 03:08 pm