ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಠಾಧೀಶರ ಪೇಟಾ ಹಾಗೂ ಹಿಂದೂ ಹೆಣ್ಣುಮಕ್ಕಳ ಬಗ್ಗೆ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಅವರು ಸಿದ್ದರಾಮಯ್ಯನವರಿಗೆ ತಿರುಗೇಟು ನೀಡಿದ್ದಾರೆ.
ಧಾರವಾಡದಲ್ಲಿ ಮಾತನಾಡಿರುವ ಅವರು, ಸಂವಿಧಾನದ ಬಗ್ಗೆ ಅದ್ಭುತವಾಗಿ ಮಾತನಾಡುವ ಸಿದ್ದರಾಮಯ್ಯನವರೇ ಈ ರೀತಿ ಹೇಳಿಕೆ ನೀಡಬಾರದು. ಮಠಾಧೀಶರದ್ದೂ ಒಂದು ಡ್ರೆಸ್ ಕೋಡ್ ಇದೆ. ಅದು ಅವರ ಸಂಪ್ರದಾಯ. ಆ ಸಂಪ್ರದಾಯವನ್ನು ಹಿಜಾಬ್‌ಗೆ ಹೋಲಿಕೆ ಮಾಡುವುದು ಎಷ್ಟು ಸರಿ ಎಂದಿದ್ದಾರೆ.
ಸಿದ್ದರಾಮಯ್ಯನವರು ಯಾವ ಅರ್ಥದಲ್ಲಿ ಈ ರೀತಿ ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ. ಶಾಲೆಯಲ್ಲಿ ಬೇಧ, ಭಾವ ಇರಬಾರದು. ಎಲ್ಲರೂ ಸಮನಾಗಿರಲಿ ಎಂದು ಸಮವಸ್ತ್ರ ಪದ್ಧತಿ ಮಾಡಲಾಗಿದೆ. ಇದರ ಉದ್ದೇಶ ಅರ್ಥವಾಗದೇ ರಾಜಕೀಯವಾಗಿ ಈ ರೀತಿ ಮಾತನಾಡಬಾರದು. ಎಲ್ಲವನ್ನೂ ಅಳೆದು ತೂಗಿ ನ್ಯಾಯಾಲಯ ತೀರ್ಪು ಕೊಟ್ಟಿದೆ. ನ್ಯಾಯಾಲಯದ ತೀರ್ಪನ್ನು ಗೌರವಿಸುವುದಿಲ್ಲ ಅಂದರೆ ಹೇಗೆ ಎಂದಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
26/03/2022 12:25 pm