ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲರಿಗೆ ಜಿಲ್ಲಾಡಳಿತದಿಂದ ಸ್ವಾಗತ

ಹುಬ್ಬಳ್ಳಿ: ಇಲ್ಲಿನ ಕರ್ನಾಟಕ ರಾಜ್ಯ ಕಾನೂನು ವಿವಿಯ ಐದನೇ ಘಟಿಕೋತ್ಸವದಲ್ಲಿ ಭಾಗವಹಿಸಲು ಇಂದು ಆಗಮಿಸಿದ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋತ್ ಅವರನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಜಿಲ್ಲಾಡಳಿತದಿಂದ ಸ್ವಾಗತಿಸಲಾಯಿತು.

ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಆಯುಕ್ತ ಲಾಭೂರಾಮ್,‌ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ್, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಪರ ಆಯುಕ್ತ ಮಾಧವ ಗಿತ್ತೆ, ಉಪ ವಿಭಾಗಾಧಿಕಾರಿ ಅಶೋಕ ತೇಲಿ, ಕಾನೂನು ವಿವಿ ಕುಲಪತಿ ಪ್ರೊ.ಪಿ.ಈಶ್ವರಭಟ್, ಕೃಷಿ ವಿವಿ ಕುಲಪತಿ ಪ್ರೊ.ಎಂ.ಬಿ.ಚೆಟ್ಟಿ, ಕಾನೂನು ವಿವಿ ಕುಲಸಚಿವ ಮಹಮದ್ ಜುಬೇರ್, ಸಮಾಜ ಕಲ್ಯಾಣ ಜಂಟಿ ನಿರ್ದೇಶಕ ಡಾ.ಎನ್.ಆರ್.ಪುರುಷೋತ್ತಮ ಮತ್ತಿತರರು ಇದ್ದರು.

Edited By : Nirmala Aralikatti
Kshetra Samachara

Kshetra Samachara

26/03/2022 01:15 pm

Cinque Terre

8.69 K

Cinque Terre

0

ಸಂಬಂಧಿತ ಸುದ್ದಿ